ಯಾವ ಸಿಎಂ ಮಾಡದಂತಹ ಕೆಲಸ ಬಿಎಸ್ ವೈ ಮಾಡಿದ್ದಾರೆ : ಅರಗ ಜ್ಞಾನೇಂದ್ರ
ಬಿಎಸ್ ವೈ ಮುಖ್ಯಮಂತ್ರಿಯಾಗಿದ್ದರೇ ನನಗೆ ಸಂತೋಷ
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ
ಶಿವಮೊಗ್ಗ : ಇದುವರೆಗೂ ಯಾವುದೇ ಮುಖ್ಯಮಂತ್ರಿ ಮಾಡದಂತಹ ಕೆಲಸವನ್ನು ಯಡಿಯೂರಪ್ಪ ಮಾಡಿದ್ದಾರೆ. ಅಲ್ಲದೇ ಬಹುಮತ ಬರದಿದ್ದರೂ ಸರ್ಕಾರ ರಚನೆ ಮಾಡುವ ಕೆಲಸವನ್ನು ಯಡಿಯೂರಪ್ಪನಂತವರು ಮಾತ್ರ ಮಾಡಬಹುದು ಎಂದು ಶಾಸಕ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ನಾಯಕತ್ವ ಬದಲಾವಣೆ ವಿಚಾರವಾಗಿ ತೀರ್ಥಹಳ್ಳಿಯಲ್ಲಿ ಮಾತನಾಡಿದ ಅವರು, ಕೆಲವು ಮಾಧ್ಯಮಗಳಲ್ಲಿ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಬರುತ್ತಿದೆ. ಸದ್ಯಕ್ಕೆ ಈ ವಿಷಯ ಅಪ್ರಸ್ತುತ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವಾಗಲಿ, ಮಂತ್ರಿ ಸ್ಥಾನವಾಗಲಿ ಖಾಲಿ ಇಲ್ಲ. ಮುಖ್ಯಮಂತ್ರಿ ಆಗಿ ಯಡಿಯೂರಪ್ಪ ಅವರು ಅತ್ಯಂತ ಸಮರ್ಥವಾಗಿ ರಾಜ್ಯವನ್ನು ಮುನ್ನಡೆಸುತ್ತಿದ್ದಾರೆ.
ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿದರೆ ನಾನು ಅತ್ಯಂತ ಸಂತೋಷಪಡುತ್ತೇನೆ ಎಂದು ತಿಳಿಸಿದ್ದಾರೆ.
ಇನ್ನು ಯಡಿಯೂರಪ್ಪ ಅವರು ಕೋವಿಡ್ ಸಮಯದಲ್ಲಿ, ಪ್ರವಾಹ ಸಂದರ್ಭದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಇದುವರೆಗೂ ಯಾವುದೇ ಮುಖ್ಯಮಂತ್ರಿ ಮಾಡದಂತಹ ಕೆಲಸವನ್ನು ಯಡಿಯೂರಪ್ಪ ಮಾಡಿದ್ದಾರೆ. ಯಡಿಯೂರಪ್ಪ ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.









