ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿ ಸಿಡಿ ಬಾಂಬ್ ಸಿಡಿಸಿದ್ದ ಬಿಜೆಪಿಯ ಮತ್ತೊಬ್ಬ ಫೈರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್, ಸಿಎಂ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧವೂ ಆಗಾಗ ಕಿಡಿಕಾರುತ್ತಲೇ ಬಂದಿದ್ದಾರೆ. ಸಂಪುಟ ವಿಸ್ತರಣೆ ವೇಳೆಯಂತೂ ಯತ್ನಾಳ್, ವಿಜಯೇಂದ್ರ ವಿರುದ್ಧವೇ ಬಹಿರಂಗ ಹೇಳಿಕೆ ನೀಡಿದ್ದರು.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಸಿಎಂ ಯಡಿಯೂರಪ್ಪ ಸರ್ಕಾರದ ಸೂಪರ್ ಸಿಎಂ ವಿಜಯೇಂದ್ರ ಎಂಬ ಮಾತುಗಳು ಆಡಳಿತ ಪಕ್ಷದವರಿಂದಲೇ ಬರುತ್ತವೆ. ವಿಜಯೇಂದ್ರ ಓಕೆ ಎನ್ನದೆ ಯಾವ ಕೆಲಸಗಳೂ ಸರ್ಕಾರದಲ್ಲಿ ನಡೆಯುವುದಿಲ್ಲ ಎಂದು ಯತ್ನಾಳ್ ಕೂಡ ಬಹಿರಂಗವಾಗಿ ಹೇಳುತ್ತಲೇ ಬಂದಿದ್ದಾರೆ.
ಇದು ಬಿಎಸ್ವೈ ವಿರುದ್ಧ ಯತ್ನಾಳ್ ಸಿಡಿ ಬಾಂಬ್ ಸಿಡಿಸಿದ ಮೇಲಂತೂ ವಿಜಯೇಂದ್ರ-ಯತ್ನಾಳ್ ನಡುವೆ ಏನೋ ನಡೆಯುತ್ತಿದೆ ಎಂಬುದಕ್ಕೆ ಪುಷ್ಠಿ ನೀಡುತ್ತಿದೆ.
ದಾವಣಗೆರೆಯ ಪಂಚಮಸಾಲಿ ಸಮಾವೇಶದಲ್ಲೇ ಸಿಎಂ ಬಿಎಸ್ವೈ ಪುತ್ರ ವಿಜಯೇಂದ್ರ ಅವರಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಹೇಳಿಕೊಂಡಿದ್ದಾರೆ.
`ನನ್ನನ್ನು ಮುಗಿಸುವುದಾಗಿ ಹೇಳಿದ್ದಾರೆ, ನಿನ್ನ ಬಗ್ಗೆ ನೀ ನೋಡು..ಸ್ವಲ್ಪ ದಿನದಲ್ಲಿ ನೀ ಬೆಂಗಳೂರಿನಲ್ಲಿ ಇರುತ್ತೀಯೋ..ಪರಪ್ಪನ ಅಗ್ರಹಾರದಲ್ಲಿ ಇರುತ್ತೀಯೋ ಕಾದು ನೋಡು.. ಎನ್ನುವ ಮೂಲಕ ವಿಜಯೇಂದ್ರ ವಿರುದ್ಧ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.
ನನ್ನ ಮುಗಿಸುವುದಾಗಿ ಹೇಳಿದ್ದಾರೆ ಎನ್ನುವ ಯತ್ನಾಳ್ ಹೇಳಿಕೆಯ ಹಿಂದೆ ರಾಜ್ಯ ರಾಜಕೀಯದಲ್ಲಿ ಹಲವು ಚರ್ಚೆಗಳು ನಡೆಯುತ್ತಿವೆ. ಇದನ್ನು ವಿಜಯೇಂದ್ರ ಮಾಡಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಯತ್ನಾಳ್ ಹೇಳಿದ್ದು, ..ಸ್ವಲ್ಪ ದಿನದಲ್ಲಿ ನೀ ಬೆಂಗಳೂರಿನಲ್ಲಿ ಇರುತ್ತೀಯೋ..ಪರಪ್ಪನ ಅಗ್ರಹಾರದಲ್ಲಿ ಇರುತ್ತೀಯೋ ಕಾದು ನೋಡು ಎಂದು ನೇರವಾಗಿಯೇ ವಿಜಯೇಂದ್ರ ವಿರುದ್ಧ ಯತ್ನಾಳ್ ಗುಟುರು ಹಾಕಿದ್ದು ನೀನಾ..ನಾನಾ ಎನ್ನುವಂತಾಗಿದೆ.
ಸಿಡಿ ವಿಚಾರ ವಿವಾದ ಏನೂ ತಣ್ಣಗಾಗಿಲ್ಲ, ನಾನೂ ತಣ್ಣಗಾಗಲ್ಲ, ಅಂಜುವುದೂ ಇಲ್ಲ, ನಾನು ಏನು ಮಾತನಾಡಬೇಕೋ ಅದನ್ನೇ ಮಾತನಾಡುತ್ತೇನೆ ಎಂದು ಹೇಳಿರುವುದು ಕೂಡ ತಮಗೆ ವಿಜಯೇಂದ್ರ ಅವರಿಂದ ಜೀವ ಬೆದರಿಕೆ ಇದೆ ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಸಂಪುಟ ವಿಸ್ತರಣೆ ವೇಳೆ ಸಿಎಂ ಯಡಿಯೂರಪ್ಪ ವಿರುದ್ಧ ನಾಯಕತ್ವ ಬದಲಾವಣೆ ಹೇಳಿಕೆ ನೀಡಿದ ನಂತರ ಯತ್ನಾಳ್ಗೆ ನೀಡಿದ್ದ ಪೊಲೀಸ್ ಭದ್ರತೆಯನ್ನು ಸಕಾರ ವಾಪಸ್ ಪಡೆದಿತ್ತು. ಅಲ್ಲಿಂದ ಯಡಿಯೂರಪ್ಪ, ವಿಜಯೇಂದ್ರ ಹಾಗೂ ಯತ್ನಾಳ್ ನಡುವಿನ ಸಂಘರ್ಷ ತಾರಕಕ್ಕೇರಿದೆ ಎನ್ನಲಾಗಿದೆ. ಇದು ಎಲ್ಲಿಗೆ ಬಂದು ನಿಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel