ಖ್ಯಾತ ನಟ ಅರ್ಜುನ್ ಸರ್ಜಾ ಅವರು ಹಿರಿಯ ನಟಿ ಲೀಲಾವತಿ (Leelavati) ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಬೆಂಗಳೂರಿನ ನೆಲಮಂಗಲದ ಹತ್ತಿರ ಇರುವ ಸೋಲದೇವನಹಳ್ಳಿ ತೋಟದ ಮನೆಗೆ ತೆರಳಿದ್ದ ಅರ್ಜುನ್ ಸರ್ಜಾ ಅವರು ಕೆಲವು ಗಂಟೆಗಳ ಕಾಲ ಹಿರಿಯ ನಟಿ ಲೀಲಾವತಿ ಅವರ ಮನೆಯಲ್ಲಿದ್ದು, ಆರೋಗ್ಯ ವಿಚಾರಿಸಿದ್ದಾರೆ.
ವಯಸ್ಸಾದ ಹಿನ್ನೆಲೆಯಲ್ಲಿ ನಟಿ ಲೀಲಾವತಿ ಅವರು ಹಾಸಿಗೆ ಹಿಡಿದಿದ್ದಾರೆ. ಹೀಗಾಗಿ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಗೆ ತೆರೆಳ ಆರೋಗ್ಯ ವಿಚಾರಿಸುತ್ತಿದ್ದಾರೆ. ಅರ್ಜುನ್ ಸರ್ಜಾ ಕೂಡ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.
87 ವರ್ಷದ ಲೀಲಾವತಿ ಆರೋಗ್ಯ ಸಮಸ್ಯೆಯಿಂದ ವಿಶ್ರಾಂತಿ ಪಡೆಯುತ್ತಿದ್ದಾರೆ. ತಾಯಿಯ ಆರೋಗ್ಯ ವಿಚಾರಿಸುವ ಸಂದರ್ಭದಲ್ಲಿ ಪುತ್ರ ಹಾಗೂ ನಟ ವಿನೋದ್ ರಾಜ್ ಕಣ್ಣೀರು ಸುರಿಸಿದ್ದಾರೆ.