ಬೆಂಗಳೂರು : 2018ರ ಸಮಯದಲ್ಲಿ ಇಡೀ ಭಾರತದ ಸಿನಿಮಾರಂಗದಲ್ಲಿ ಹಾಗೆಯೇ ಸ್ಯಾಂಡಲ್ ವುಡ್ ನಲ್ಲೂ ಕೂಡ #MeToo ಬಿರುಗಾಳಿ ಎಬ್ಬಿಸಿತ್ತು.. ಆಗ ಸ್ಯಾಂಡಲ್ ವುಡ್ ನಟಿ ಶೃತಿ ಹರಿಹರನ್ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿಬಿಟ್ಟಿದ್ರು.. ಆದ್ರೆ ಬಹುತೇಕ ಎಲ್ರೂ ಸಹ ಅರ್ಜುನ್ ಸರ್ಜಾ ಪರ ನಿಂತಿದ್ದರು.. ಇದೀಗ ಶೃತಿ ಹರಿಹರನ್ ಮಾಡಿದ್ದ ಆರೋಪಕ್ಕೆ ಯಾವುದೇ ಸಾಕ್ಷಿಯಿಲ್ಲ ಎಂದು ಅವರಿಗೆ ಕ್ಲೀನ್ ಚಿಟ್ ನೀಡ್ಓದ್ರ ಜೊತೆಗೆ ಶೃತಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿದೆ..
ಇದಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವ್ಯಂಗ್ಯಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ.. ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಸೊಳ್ಳೆ ಬ್ಯಾಟ್ನಿಂದ ಸೊಳ್ಳೆಗಳನ್ನು ಸಾಯಿಸುತ್ತಿರುವ ಹಾಸ್ಯಕರವಾದ ವೀಡಿಯೋವೊಂದನ್ನು ಶೇರ್ ಮಾಡಿಕೊಂಡು ಸೊಳ್ಳೆ, ಕ್ರಿಮಿ, ಕೀಟ ಎಂದು ಕ್ಯಾಪ್ಷನ್ನಲ್ಲಿ ಬರೆದುಕೊಂಡಿದ್ದರು. ಜೊತೆಗೆ ಧರ್ಮೋ ರಕ್ಷತಿ ರಕ್ಷಿತಃ ಎಂದು ಸಹ ಬರೆದುಕೊಂಡಿದ್ದಾರೆ.
ಅಲ್ಲದೇ ನಟಿ ಮೇಘನಾ ಸುಂದರ್ ರಾಜ್ ಸಹ ಈ ಬಗ್ಗೆ ಪೋಸ್ಟ್ ಹಾಕಿದ್ದು, ಅರ್ಜುನ್ ಸರ್ಜಕಾ ಅವರನ್ನ ಜೆಂಟಲ್ ಮೆನ್ ಎಂದು ಕರೆದಿದ್ದಾರೆ.. ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಜಂಟಲ್ ಮ್ಯಾನ್ ಇಸ್ ಆಲ್ವೆಸ್ ಜಂಟಲ್ ಮ್ಯಾನ್ ಎಂದು ಬರೆದುಕೊಂಡಿದ್ದಾರೆ.
2018ರಲ್ಲಿ ನಟಿ ಶೃತಿಹರಿಹರನ್ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಸದ್ಯ ಈ ಪ್ರಕರಣ ಕುರಿತಂತೆ ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆ ಪೊಲೀಸರು ಸೋಮವಾರ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಇದರಿಂದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅರ್ಜುನ್ ಸರ್ಜಾಗೆ ಮೂರು ವರ್ಷಗಳ ಬಳಿಕ ಕ್ಲೀನ್ ಚಿಟ್ ಸಿಕ್ಕಿದಂತಾಗಿದೆ.