MI | ಇಂದು ಮೈದಾನಕ್ಕೆ ಇಳಿಯಲಿದ್ದಾರೆ ಅರ್ಜುನ್ ತೆಂಡೂಲ್ಕರ್
ಮುಂಬೈ ಇಂಡಿಯನ್ಸ್ ಐಪಿಎಲ್ 2022 ಸೀಸನ್‌ನಲ್ಲಿ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತನ್ನ ಕೊನೆಯ ಪಂದ್ಯವನ್ನು ಆಡಲಿದೆ. ಮುಂಬೈ ಇಂಡಿಯನ್ಸ್ 13 ಪಂದ್ಯಗಳಲ್ಲಿ ಮೂರು ಗೆಲುವುಗಳು .. 10 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದು ಗೆಲುವಿನೊಂದಿಗೆ ಟೂರ್ನಿ ಮುಗಿಸಲು ಮುಂಬೈ ಪ್ಲಾನ್ ಮಾಡಿಕೊಂಡಿದೆ.
ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ ಪ್ಲೇ ಆಫ್ ತಲುಪಲಿದೆ.ಇಲ್ಲದಿದ್ದರೆ ಆರ್‌ಸಿಬಿಗೆ ಪ್ಲೇ ಆಫ್ಸ್ ಗೆ ಅವಕಾಶ ಸಿಗಲಿದೆ.
ಇದರ ನಡುವೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪ್ಲೇಯಿಂಗ್ ಇಲೆವೆನ್ ನಲ್ಲಿ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಗೆ ಅವಕಾಶ ಸಿಗುವ ಸಾಧ್ಯತೆಗಳಿವೆ.
ಈ ಸಂಬಂಧ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ವಿಡಿಯೋವೊಂದನ್ನು ಹಂಚಿಕೊಂಡಿದೆ. ಇದರಲ್ಲಿ ಅರ್ಜುನ್ ನೆಟ್ ಅಭ್ಯಾಸ ಮಾಡುತ್ತಿದ್ದಾರೆ. ಹೀಗಾಗಿ ಅರ್ಜುನ್ ಐಪಿಎಲ್ ಗೆ ಪಾದಾರ್ಪಣೆ ಮಾಡುವ ಸಾಧ್ಯತೆಗಳಿವೆ.
2021ರಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಅರ್ಜುನ್ ತೆಂಡೂಲ್ಕರ್ ಅವರನ್ನು ಖರೀದಿಸಿತ್ತು. ಅಂದಿನ ಇಂದಿನವರೆಗೂ ಯಾವುದೇ ಪಂದ್ಯದಲ್ಲಿ ಅವರನ್ನ ಕಣಕ್ಕಿಳಿಸಿಲ್ಲ. arjun-tendulkar-nails-yorker-drill-mi-training-session-viral