Arjun Tendulkar : ರಣಜಿ ಕ್ರಿಕೆಟ್‌ಗೆ ಸಚಿನ್ ಪುತ್ರ ಪಾದಾರ್ಪಣೆ
ಮುಂಬೈ ರಣಜಿ ತಂಡದಲ್ಲಿ ಬೆಂಚ್ ಕಾಯುತ್ತಿದ್ದ ಅರ್ಜುನ್ ತೆಂಡೂಲ್ಕರ್ ಅವರ ಕ್ರಿಕೆಟ್ ವೃತ್ತಿಬದುಕು ಇದೀಗ ಬಹುದೊಡ್ಡ ತಿರುವು ಪಡೆದುಕೊಂಡಿದೆ. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಕೊನೆಗೂ ಪ್ರಥಮದರ್ಜೆ ಕ್ರಿಕೆಟ್‌ಗೆ ಪ್ರವೇಶಿಸಿದ್ದಾರೆ.
ಅರ್ಜುನ್, ಮಂಗಳವಾರ ಆರಂಭವಾದ 2022-23ರ ಸಾಲಿನ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಗೋವಾ ಪರ ಕಣಕ್ಕಿಳಿದು ಪ್ರಥಮ ದರ್ಜೆ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ.
ಎಡಗೈ ವೇಗಿ ಹಾಗೂ ಕೆಳ ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟಿಂಗ್ ಮಾಡುವ ಸಾಮರ್ಥ್ಯ ಹೊಂದಿರುವ ಅರ್ಜುನ್ ಮಿಂಚಿನ ವೇಗದ ಬೌಲಿಂಗ್ ದಾಳಿ ಮೂಲಕವೂ ಗಮನ ಸೆಳೆದಿದ್ದಾರೆ.
ಮುಂಬೈನಲ್ಲಿ ಸರಿಯಾದ ಅವಕಾಶಗಳು ಸಿಗದ ಹಿನ್ನೆಲೆಯಲ್ಲಿ ಅರ್ಜುನ್ ತೆಂಡುಲ್ಕರ್ ಕಳೆದ ವರ್ಷ ಗೋವಾ ಕಡೆ ಮುಖ ಮಾಡಿದ್ದರು.








