ಕೊರೊನಾಗೆ ಅರ್ಜುನ ಪ್ರಶಸ್ತಿ ವಿಜೇತ ಟೆನ್ನಿಸ್ ಆಟಗಾರ ವಿ. ಚಂದ್ರಶೇಖರ್ ಬಲಿ v-chandrasekhar
ಚೆನ್ನೈ : ಕೊರೊನಾ ಸೋಂಕಿನಿಂದಾಗಿ ಅರ್ಜುನ ಪ್ರಶಸ್ತಿ ವಿಜೇತ, ಭಾರತದ ಮಾಜಿ ಟೇಬಲ್ ಟೆನ್ನಿಸ್ ಆಟಗಾರ ವಿ.ಚಂದ್ರಶೇಖರ್ ಅವರು ಕೊನೆಯುಸಿರೆಳೆದಿದ್ದಾರೆ.
ಕೆಲ ದಿನಗಳ ಹಿಂದೆ ವಿ.ಚಂದ್ರಶೇಖರ್ ಅವರಿಗೆ ಕೊರೊನಾ ಸೋಂಕಿರುವುದು ದೃಢವಾಗಿತ್ತು.
ಈ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲು ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ವಿ.ಚಂದ್ರಶೇಖರ್ ಅವರು ಟೇಬಲ್ ಟೆನ್ನಿಸ್ ಆಟದಲ್ಲಿ ಮೂರು ಬಾರಿ ರಾಷ್ಟ್ರೀಯ ಚಾಂಪಿಯನ್ ಪ್ರಶಸ್ತಿ ಗಳಿಸಿದ್ದರು.
1984 ರಲ್ಲಿ ಮೊಣಕಾಲು ಶಸ್ತ್ರ ಚಿಕಿತ್ಸೆಗೆ ಒಳಗಾದ ನಂತರ ಕ್ರೀಡಾ ಬದುಕು ಮೊಟಕುಗೊಳಿಸಿದ್ದರು.









