( Arnab Goswami ) ಅರ್ನಬ್ ಬಂಧನ : ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ ಎಂದ ಬಿ.ಎಸ್.ಸಂತೋಷ್
ಬೆಂಗಳೂರು : ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ( Arnab Goswami ) ಅವರನ್ನು ಮಹಾರಾಷ್ಟ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ. 2018 ರಲ್ಲಿ ಅವರ ಮತ್ತು ಇತರ ಇಬ್ಬರು ವಿರುದ್ಧ ದಾಖಲಾಗಿರುವ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಗೋಸ್ವಾಮಿ ನಿವಾಸದಿಂದ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಇದನ್ನೂ ಓದಿ : ಪಿಂಚಣಿ ಹಣಕ್ಕಾಗಿ ಪತ್ನಿಯನ್ನು ಕೊಂದ 92ರ ವೃದ್ಧ!
ಅರ್ನಬ್ ಬಂಧನದ ಕುರಿತಾಗಿ ಟ್ವೀಟ್ ಮಾಡಿರುವ ಬಿ.ಎಲ್. ಸಂತೋಷ್, ಅರ್ನಬ್ ಗೋಸ್ವಾಮಿ ಅವರ ಬಂಧನ ವಾಕ್ ಸ್ವಾತಂತ್ರ್ಯದ ಮೇಲೆ ನಡೆದ ದಾಳಿ ಎಂದು ಕಿಡಿಕಾರಿದ್ದಾರೆ.
ಮುಂಬೈ ಪೊಲೀಸರು ಉಗ್ರ ಅಜ್ಮಲ್ ಕಸಬ್ ಗೆ ಬಿರಿಯಾನಿ ತಿನ್ನಿಸಿದ್ದರು. ಆದರೆ, ಇದೀಗ ಅವರನ್ನು ಪ್ರಶ್ನಿಸಿದ ತಪ್ಪಿಗೆ ಮಾಧ್ಯಮಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ವಾಕ್ ಸ್ವಾತಂತ್ರ್ಯದ ಮೇಲೆ ನಂಬಿಕೆ ಇರುವ ಎಲ್ಲರೂ ದನಿ ಎತ್ತುವ ಸಮಯವಿದು ಎಂದು ಸಂತೋಷ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
53 ವರ್ಷದ ಇಂಟೀರಿಯರ್ ಡಿಸೈನರ್ ಅವರ ಆತ್ಮಹತ್ಯೆಗೆ ಅರ್ನಬ್ ಗೋಸ್ವಾಮಿಯವರು ಪ್ರಚೋದನೆ ನೀಡಿರುವ ಆರೋಪದ ಮೇಲೆ ಮುಂಬೈ ಪೊಲೀಸರು ಅವರನ್ನು ಇಂದು ಬೆಳಗ್ಗೆ ಅವರ ನಿವಾಸದಲ್ಲಿ ಬಂಧಿಸಿದ್ದಾರೆ.
ಕೊಂಕಣ ರೈಲ್ವೆಯಲ್ಲಿ ಉದ್ಯೋಗಾವಕಾಶ – 58 ಟೆಕ್ನೀಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಅವರು ಮೇ 2018 ರಲ್ಲಿ ಅಲಿಬಾಗ್ನ ತಮ್ಮ ಬಂಗಲೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ರಿಪಬ್ಲಿಕ್ ಟಿವಿಯಿಂದ ಬಾಕಿ ಪಾವತಿಸದಿರುವುದು ತನ್ನ ತಂದೆ ಮತ್ತು ಅಜ್ಜಿಯನ್ನು ಆತ್ಮಹತ್ಯೆಗೆ ದೂಡಿದೆ ಎಂದು ನಾಯಕ್ ಅವರ ಪುತ್ರಿ ಅದ್ಯ್ನಾ ಆರೋಪಿಸಿದ್ದರು.
ರಿಪಬ್ಲಿಕ್ ಟಿವಿ ಈ ಆರೋಪಗಳನ್ನು ನಿರಾಕರಿಸಿತು ಮತ್ತು ಕೆಲವು ಪಟ್ಟಭದ್ರ ಹಿತಾಸಕ್ತಿ ಗುಂಪುಗಳು ಸುಳ್ಳು ಮತ್ತು ದುರುದ್ದೇಶಪೂರಿತ ಅಭಿಯಾನವನ್ನು ನಡೆಸುತ್ತಿವೆ. ನಾಯಕ್ ಅವರ ನಿಧನವನ್ನು ಒಳಗೊಂಡ ದುರಂತ ಘಟನೆಯನ್ನು ಬಳಸಿಕೊಳ್ಳುವ ಮೂಲಕ ಚಾನೆಲ್ ವಿರುದ್ಧ ಸುಳ್ಳು ಹೇಳಿಕೆಗಳು ಮತ್ತು ಪ್ರಚೋದನೆಗಳನ್ನು ನೀಡುತ್ತಿವೆ ಎಂದು ಹೇಳಿತ್ತು
ಕಳೆದ ವಾರ, ಮುಂಬೈ ಪೊಲೀಸರು ಪೊಲೀಸ್ ಇಲಾಖೆಯ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರ ಮಾಡಿದ್ದಕ್ಕಾಗಿ ಕಾರ್ಯನಿರ್ವಾಹಕ ಸಂಪಾದಕ, ನಿರೂಪಕ, ಇಬ್ಬರು ವರದಿಗಾರರು ಮತ್ತು ರಿಪಬ್ಲಿಕ್ ಮೀಡಿಯಾ ನೆಟ್ವರ್ಕ್ನ ಇತರ ಸಂಪಾದಕೀಯ ಸಿಬ್ಬಂದಿ ಮೇಲೆ ಪ್ರಕರಣ ದಾಖಲಿಸಿದ್ದರು.
ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ವಿರುದ್ಧ ಪೊಲೀಸ್ ಸಿಬ್ಬಂದಿಯಲ್ಲಿ ಅಸಮಾಧಾನವನ್ನು ಉಂಟುಮಾಡುವ ಸುದ್ದಿಯನ್ನು ರಿಪಬ್ಲಿಕ್ ಚಾನೆಲ್ ಪ್ರಸಾರ ಮಾಡಿದೆ ಎಂದು ಪೊಲೀಸರು ತಿಳಿಸಿದ್ದರು. ಮುಂಬೈ ಪೊಲೀಸ್ ಸಿಬ್ಬಂದಿ ಪರಮ್ ಬಿರ್ ಸಿಂಗ್ ವಿರುದ್ಧ ದಂಗೆ ಏಳುತ್ತಿದ್ದಾರೆ ಮತ್ತು ಅವರ ಆದೇಶಗಳನ್ನು ಅವರು ಪಾಲಿಸುತ್ತಿಲ್ಲ ಎಂದು ಚಾನೆಲ್ ಪ್ರಸಾರ ಮಾಡಿತ್ತು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel