Arnab goswamy
ನವದೆಹಲಿ : ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದ ರಿಪಬ್ಲಿಕ್ ಟಿವಿ ಸಂಸ್ಥಾಪಕ ಅರ್ನಬ್ ಗೋಸ್ವಾಮಿಯವರಿಗೆ ಸದ್ಯ ಬಿಗ್ ರಿಲೀಫ್ ಸಿಕ್ಕಿದೆ. 2018ರಲ್ಲಿ ಮುಂಬೈ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿತ್ತು. ಜಾಮೀನು ಅರ್ಜಿಯನ್ನು ನಿರಾಕರಿಸಿದ್ದರಿಂದ ಸುಪ್ರೀಂ ಕೋರ್ಟ್ ಗೆ ಜಾಮೀನಿಗಾಗಿ ಮೇಲ್ಮನವಿ ಸಲ್ಲಿಸಲಾಗಿತ್ತು. ಇದೀಗ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯವು ಅರ್ನಬ್ ಗೋಸ್ವಾಮಿಯವಿಗೆ ಜಾಮೀನು ನೀಡಿದೆ.
ಯುಪಿ ಉಪಸಮರ : 7ರಲ್ಲಿ 6 ‘ಕಮಲ’ದ ಪಾಲು ಒಂದು ‘ಸಮಾಜವಾದಿ’ಗೆ
2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರ ಕಸ್ಟಡಿಯಲ್ಲಿರುವ ರಿಪಬ್ಲಿಕ್ ಟಿವಿ ಎಡಿಟರ್ ಇನ್ ಚೀಫ್ ಅರ್ನಬ್ ಗೋಸ್ವಾಮಿ ಹಾಗೂ ನಿರೂಪಕರು ಮತ್ತು ಪ್ರಕರಣದ ಇತರ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಅರ್ನಬ್ ಗೋಸ್ವಾಮಿ ಮತ್ತು ಇತರರರಿಗೆ 50 ಸಾವಿರ ರೂಪಾಯಿ ಬಾಂಡ್ ನ ಮೇಲೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ. ಇನ್ನೂ ಈ ಪ್ರಕರಣ ಹೈಕೋರ್ಟ್ ನಲ್ಲಿ ಬಾಕಿ ಇರುವುದರಿಂದ, ಈ ಪ್ರರಣದ ಕಾನೂನು ಅಂಶಗಳ ಬಗ್ಗೆ ಸುಪ್ರೀಂ ಕೋರ್ಟ್ ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಅವರು ಹೇಳಿದ್ದಾರೆ.
Arnab goswamy
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel