ADVERTISEMENT
Thursday, June 19, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಗೌರವಯುತ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿ : ಹೆಚ್.ಡಿ.ಕುಮಾರಸ್ವಾಮಿ

Namratha Rao by Namratha Rao
April 23, 2021
in Newsbeat, Politics, ರಾಜಕೀಯ
HD Kumaraswamy

ex cm hd-kumaraswamy-reacts-on-bidar-accident

Share on FacebookShare on TwitterShare on WhatsappShare on Telegram

ಗೌರವಯುತ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿ : ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಗೌರವಯುವ ಅಂತ್ಯಸಂಸ್ಕಾರಕ್ಕೆ ಸರ್ಕಾರ ಸರಿಯಾದ ವ್ಯವಸ್ಥೆ ಮಾಡದೇ ಇರುವ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.

Related posts

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

June 19, 2025
ಸೋಯಾ 65 ಬಿರಿಯಾನಿ ರೆಸಿಪಿ ಒಮ್ಮೆ Try ಮಾಡಿ

ಸೋಯಾ 65 ಬಿರಿಯಾನಿ ರೆಸಿಪಿ ಒಮ್ಮೆ Try ಮಾಡಿ

June 19, 2025

ಈ ಕುರಿತು ಟ್ವೀಟ್ ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಚಿಕಿತ್ಸೆ ದಕ್ಕದೆ ಅತ್ಯಂತ ಅಮಾನವೀಯವಾಗಿ ಸಾವನ್ನಪ್ಪಿದ ಕೊರೊನಾ ಸೋಂಕಿತರ ಶವಗಳ ಗೌರವಯುತ ಅಂತ್ಯ ಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆಯನ್ನು ಮಾಡುವಲ್ಲಿ ಕೈ ಚೆಲ್ಲಿ ಕುಳಿತಿರುವ ರಾಜ್ಯ ಸರ್ಕಾರದ ವೈಫಲ್ಯ ಅತ್ಯಂತ ಬೇಜವ್ದಾರಿತನದ ನಿರ್ದಯಿ ವರ್ತನೆ.

ಕೊರೊನಾ ಮಹಾಮಾರಿಯಿಂದ ಜೀವ ತೆತ್ತ ವ್ಯಕ್ತಿಗಳ ಶವಸಂಸ್ಕಾರಕ್ಕೆ ಬೆಂಗಳೂರಿನ ಅಷ್ಟ ದಿಕ್ಕುಗಳಲ್ಲಿನ ಡೀಮ್ಡ್ ಅರಣ್ಯ ಪ್ರದೇಶದಲ್ಲಿ ದಿನವೊಂದಕ್ಕೆ ಸುಮಾರು 25 ಶವಗಳನ್ನು ಅಂತ್ಯಸಂಸ್ಕಾರ ಮಾಡಲು ಸರಕಾರ ತಕ್ಷಣವೇ ಸಮರೋಪಾದಿಯಲ್ಲಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ.

ಬೆಂಗಳೂರಿನ ಎಂಟೂ ದಿಕ್ಕುಗಳಲ್ಲೂ ಮರಗಳಿಲ್ಲದ ಬೆಂಗಾಡು ಅರಣ್ಯ ಭೂಮಿಯಿದೆ. ಇಲ್ಲಿ ಪ್ರತಿದಿನ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತಿಮ ಸಂಸ್ಕಾರಕ್ಕೆ ಕೂಡಲೇ ವ್ಯವಸ್ಥೆ ಮಾಡಬೇಕು. ಸರಕಾರ ಇದನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು.

HD Kumaraswamy

ಕೊರೊನಾ ಸೋಂಕಿತರಿಗೆ ಬೆಡ್ ಗಳನ್ನು, ಆಕ್ಸಿಜನ್, ವೆಂಟಿಲೇಟರ್, ಹಾಗೂ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರಕಾರ ಕೊಡಲಿಲ್ಲ. ಕನಿಷ್ಟ ಅವರ ಅಂತ್ಯಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಅತ್ಯಂತ ನೋವಿನಿಂದ ಕೈ ಮುಗಿದು ಕೇಳಿಕೊಳ್ಳುತ್ತೇನೆ.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ವ್ಯವಸ್ಥೆ ಮಾಡುವಲ್ಲಿ ಮುಗ್ಗರಿಸಿ ಬಿದ್ದ ಸರಕಾರ ಅಂತ್ಯಸಂಸ್ಕಾರಕ್ಕಾದರೂ ಜಾಗದ ವ್ಯವಸ್ಥೆ ಮಾಡುವಲ್ಲಿ ಇನ್ನೂ ತಡಮಾಡದೆ ಕೈ ಕಟ್ಟಿ ಕೂರಬಾರದು.

ಇಲ್ಲದಿದ್ದರೆ, ಜನರ ಹಿಡಿಶಾಪ ಸರಕಾರಕ್ಕೆ ತಗಲುವುದರಲ್ಲಿ ಸಂಶಯವೇ ಬೇಡ. ಸಾವನ್ನಪ್ಪಿದ ಕೊರೊನಾ ಸೋಂಕಿತರ ಬಂಧು ಬಳಗದವರು ಪಡುತ್ತಿರುವ ಬವಣೆಯನ್ನು ಕಂಡರೆ, ಹೃದಯ ಕಿವುಚಿದಂತಾಗುತ್ತದೆ ಎಂದು ಬರೆದುಕೊಂಡಿದ್ದಾರೆ.

corona cases

Tags: Corona VirusH D KUMARASWAMYkarnataka
ShareTweetSendShare
Join us on:

Related Posts

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

by Shwetha
June 19, 2025
0

ಇತ್ತೀಚೆಗೆ ಜರುಗಿದ G7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿಯ ಪ್ರಧಾನ ಮಂತ್ರಿ ಜಾರ್ಜಿಯಾ ಮೆಲೋನಿ ನಡುವಿನ ಸೌಹಾರ್ದಭರಿತ ಭೇಟಿಯು ಸೋಶಿಯಲ್ ಮೀಡಿಯಾ ಮತ್ತು ರಾಜಕೀಯ...

ಸೋಯಾ 65 ಬಿರಿಯಾನಿ ರೆಸಿಪಿ ಒಮ್ಮೆ Try ಮಾಡಿ

ಸೋಯಾ 65 ಬಿರಿಯಾನಿ ರೆಸಿಪಿ ಒಮ್ಮೆ Try ಮಾಡಿ

by Shwetha
June 19, 2025
0

ಸೋಯಾ 65 ಬಿರಿಯಾನಿ ತಯಾರಿಸಲು ಬೇಕಾಗುವ ಸಾಮಗ್ರಿಗಳು: * ಸೋಯಾ 65 ಗಾಗಿ: * 1 ಕಪ್ ಸೋಯಾ ಚಂಕ್ಸ್ * 2 ಟೇಬಲ್ಸ್ಪೂನ್ ಕಾರ್ನ್ಫ್ಲೋರ್ *...

ಮಂಡ್ಯದ ಮೇಲುಕೋಟೆಯಲ್ಲಿ ನೆಲೆನಿಂತ ಶ್ರೀ ಚೆಲುವನಾರಾಯಣ ಸ್ವಾಮಿಯ ಇತಿಹಾಸದ ಅನಾವರಣ

ಮಂಡ್ಯದ ಮೇಲುಕೋಟೆಯಲ್ಲಿ ನೆಲೆನಿಂತ ಶ್ರೀ ಚೆಲುವನಾರಾಯಣ ಸ್ವಾಮಿಯ ಇತಿಹಾಸದ ಅನಾವರಣ

by Shwetha
June 19, 2025
0

ಶ್ರೀ ಚೆಲುವನಾರಾಯಣ ಸ್ವಾಮಿ ದೇವಾಲಯವು ಕರ್ನಾಟಕದ ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿದೆ. ಈ ದೇವಾಲಯವು ವೈಷ್ಣವ ಸಂಪ್ರದಾಯಕ್ಕೆ ಬಹಳ ಮಹತ್ವದ್ದಾಗಿದೆ ಇತಿಹಾಸ * ಪುರಾಣಗಳ ಪ್ರಕಾರ, ಬ್ರಹ್ಮನು ವಿಷ್ಣುವಿನ...

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

by Shwetha
June 18, 2025
0

ಏರ್ ಇಂಡಿಯಾದ ಅಂತಾರಾಷ್ಟ್ರೀಯ ಹಾರಾಟಗಳು ತಾಂತ್ರಿಕ ದೋಷ ಸೇರಿದಂತೆ ವಿವಿಧ ಕಾರಣಗಳಿಂದ ಇಂದು ಗಂಭೀರ ಸಮಸ್ಯೆಯಾಗಿ ಕಾಡಿದೆ. ಒಟ್ಟು 7 ಅಂತಾರಾಷ್ಟ್ರೀಯ ವಿಮಾನಗಳನ್ನು ಏರ್ ಇಂಡಿಯಾ ರದ್ದುಗೊಳಿಸಿರುವುದು...

ಟೆಸ್ಟ್ ತಂಡದ ನಾಯಕತ್ವ ನಾನೇ ನಿರಾಕರಿಸಿದ್ದೇನೆ – ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ

ಟೆಸ್ಟ್ ತಂಡದ ನಾಯಕತ್ವ ನಾನೇ ನಿರಾಕರಿಸಿದ್ದೇನೆ – ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ

by Shwetha
June 18, 2025
0

ಭಾರತದ ವೇಗಿ ಜಸ್ಪ್ರೀತ್ ಬುಮ್ರಾ, ಐಪಿಎಲ್ ಮುಗಿದ ನಂತರ ತಮ್ಮ ಬಗ್ಗೆ ಹರಡಿರುವ ಮಾತುಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನೀಡಿದ ಟೆಸ್ಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram