ಬೆಂಗಳೂರು: ಅನಾರೋಗ್ಯದಿಂದಾಗಿ ಇಹಲೋಕ ತ್ಯಜಿಸಿರುವ ಕಿಚ್ಚ ಸುದೀಪ್ (Kiccha Sudeep) ಅವರ ತಾಯಿ ಅಂತಿಮ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ಕಿಚ್ಚ ಸುದೀಪ್ ತಾಯಿ ಸರೋಜಾ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ವಿಧಿವಶರಾಗಿದ್ದು, ಜೆಪಿ ನಗರದ (JP Nagar) ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಜಯನಗರದ ಅಪೋಲೋ ಆಸ್ಪತ್ರೆಯಿಂದ ಸರೋಜಾ ಅವರ ಪಾರ್ಥಿವ ಶರೀರವನ್ನು ಅಂಬುಲೆನ್ಸ್ ಮೂಲಕ ಜೆಪಿ ನಗರದ ನಿವಾಸಕ್ಕೆ ತರಲಾಗಿದೆ. ಈ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್ ಅವರು ಕೂಡ ಅಂಬುಲೆನ್ಸ್ನಲ್ಲಿಯೇ ಮನೆಗೆ ತೆರಳಿದ್ದಾರೆ. ಮನೆ ಬಳಿ ಅಂತಿಮ ದರ್ಶನಕ್ಕೆ ಶಾಮಿಯಾನ ಹಾಕಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಅಭಿಮಾನಿಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇಂದು ಸಂಜೆಯ ವೇಳೆ ವಿಲ್ಸನ್ ಗಾರ್ಡನ್ನಲ್ಲಿರುವ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.