ನವದೆಹಲಿ: ಅಭಿವೃದ್ಧಿಯ ಹರಿಕಾರ, ಆರ್ಥಿಕತೆಯ ವಾಸ್ತುಶಿಲ್ಪಿ, ರಾಜಕಾರಣಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (Manmohan Singh) ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ನಿವಾಸದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಗುರುವಾರ ಇಹಲೋಕ ತ್ಯಜಿಸಿದ್ದಾರೆ. ರಾತ್ರಿ 9:51ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಅಂತ ಏಮ್ಸ್ ಆಸ್ಪತ್ರೆ ತಿಳಿಸಿದೆ. ಪತ್ನಿ ಗುರ್ಶನ್ ಕೌರ್, ಮೂವರು ಪುತ್ರಿಯರನ್ನು ಸಿಂಗ್ ಅಗಲಿದ್ದಾರೆ. ಅಮೆರಿಕದಲ್ಲಿರುವ ಪುತ್ರಿ ಆಗಮನಕ್ಕಾಗಿ ಕಾಯಲಾಗುತ್ತಿದೆ.
ಹೀಗಾಗಿ ಶನಿವಾರ ಬೆಳಗ್ಗೆ 8ಕ್ಕೆ ದೆಹಲಿ ಎಐಸಿಸಿ ಕಚೇರಿಗೆ ಪಾರ್ಥಿವ ಶರೀರವನ್ನ ರವಾನೆ ಮಾಡಿ ಬೆಳಗ್ಗೆ 9:30ರ ವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 9:30ರ ಬಳಿಕ ಅಂತಿಮ ಯಾತ್ರೆ ಆರಂಭವಾಗಲಿದ್ದು, ಸುಮಾರು 11:45ಕ್ಕೆ ನಿಗಮ್‌ಬೋಧ್ ಘಾಟ್‌ನಲ್ಲಿ ಸರ್ಕಾರಿ ಮತ್ತು ಸೇನಾಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿದೆ.
ಸೇನಾಗೌರವಗಳಿಗೆ ಸೇನಾ ಇಲಾಖೆ ಕೂಡ ಸನ್ನದ್ಧವಾಗಿದೆ. 7 ದಿನ ದೇಶಾದ್ಯಂತ ಶೋಕಾಚರಣೆ ಘೋಷಿಸಲಾಗಿದೆ. ಗಣ್ಯ ವ್ಯಕ್ತಿಗಳು ಸೇರಿದಂತೆ ದೇಶದ ಜನರು ಕಂಬನಿ ಮಿಡಿಯುತ್ತಿದ್ದಾರೆ
ಅಜ್ಜಯ್ಯನ ಶಕ್ತಿಯಿಂದಲೇ ಸರ್ಕಾರ ಸುಭದ್ರ, ಮುಂದೇನಾಗುತ್ತೆ ಅನ್ನೋದನ್ನ ಕಾದು ನೋಡಿ: ಡಿಕೆ ಶಿವಕುಮಾರ್
ತುಮಕೂರು: ರಾಜ್ಯ ರಾಜಕಾರಣದಲ್ಲಿ ಸದಾ ಸುದ್ದಿಯಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೊಮ್ಮೆ ತಮ್ಮ ಅಚಲ ದೈವಭಕ್ತಿಯನ್ನು ಪ್ರದರ್ಶಿಸಿದ್ದು, ರಾಜ್ಯ ಸರ್ಕಾರದ ಅಸ್ತಿತ್ವ ಮತ್ತು ಭವಿಷ್ಯದ ಕುರಿತು...








