ಮಂಗಳೂರು : ಡ್ರಗ್ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ನಟ, ಡ್ಯಾನ್ಸರ್ ಕಿಶೋರ್ ಶೆಟ್ಟಿಯವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಕಿಶೋರ್ ಶೆಟ್ಟಿ ಬಾಲಿವುಡ್ ಚಿತ್ರ ‘ಎಬಿಸಿಡಿ’ ಸಹಿತ ಕೆಲವು ಸಿನಿಮಾಗಳಲ್ಲಿ ನಟನೆ ಮಾಡಿದ್ದರು. ಅಲ್ಲದೆ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ರಿಯಾಲಿಟಿ ಶೋದಲ್ಲೂ ಸ್ಪರ್ಧಿಸಿದ್ದರು.
ಇಂದು ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಡ್ರಗ್ಸ್ ಸಮೇತವಾಗಿ ನಟ ಕಿಶೋರ್ ಶೆಟ್ಟಿಯನ್ನು ಬಂಧಿಸಲಾಗಿದೆ.
ಈತ ಬಾಲಿವುಡ್ ನಿಂದ ಹಿಡಿದು ಮಂಗಳೂರಿನವರೆಗೂ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ.








