ಮಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಗರದ ದೇರಳಕಟ್ಟೆ ಪರಿಸರದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ. ಬಂಧಿತನಿಂದ 6 ಲಕ್ಷ 41 ಸಾವಿರ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಪ್ರಕರಣವು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ತೌಡುಗೋಳಿ ಕ್ರಾಸ್ ನಿವಾಸಿ ಅಬ್ದುಲ್ ಅಜೀಜ್ (42) ಬಂಧಿತ ಆರೋಪಿಯಾಗಿದ್ದಾನೆ.
ಆರೋಪಿ ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.