ಧಾರವಾಡ: ಗ್ರಾಪಂ ಸದಸ್ಯನ ಕೊಲೆ ಮಾಡಿರುವ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಕಲಘಟಗಿ ಬಗಡಗೇರಿಯಲ್ಲಿ ಈ ಘಟನೆ ನಡೆದಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಲ್ಲಪ್ಪ ದಂಡಿನ ಹಾಗೂ ನಾಗಪ್ಪ ದಂಡಿನ ಬಂಧಿತ ಆರೋಪಿಗಳು ಎನ್ನಲಾಗಿದೆ.
ಗ್ರಾಪಂ ಸದಸ್ಯ ನಿಂಗಪ್ಪ ದಾಸಪ್ಪ ಎಂಬುವವರ ಜೊತೆ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿತ್ತು. ಈ ಗಲಾಟೆ ವಿಕೋಪಕ್ಕೆ ತೆರಳಿ ನಿಂಗಪ್ಪನ ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದರು. ಆ ನಂತರ ಆರೋಪಿಗಳು ತಲೆ ಮರೆಸಿಕೊಂಡಿದ್ದರು. ಈ ಪ್ರಕರಣ ದಾಖಲಾದ 24 ಗಂಟೆಗಳಲ್ಲಿಯೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.