ಬೆಂಗಳೂರು: ಉಗ್ರರೊಂದಿಗೆ (Terrorist) ಸಂಪರ್ಕ ಸಾಧಿಸಿ ಬೆಂಗಳೂರಿನಲ್ಲಿ (Bengaluru) ದೊಡ್ಡ ಮಟ್ಟದ ಸ್ಫೋಟಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು (Suspected Terrorists) ಬಂಧಿಸಲಾಗಿದೆ.
ಕೇಂದ್ರ ಗುಪ್ತಚರ ಇಲಾಖೆಯ (Central Intelligence Agency) ಮಾಹಿತಿಯ ಮೇರೆಗೆ ಸಿಸಿಬಿ (CCB) ಅಧಿಕಾರಿಗಳು ಬಂಧಿಸಿದ್ದಾರೆ. ಸುಹೇಲ್ , ಉಮರ್, ತಬ್ರೇಜ್ , ಮುದಾಸಿರ್ , ಫೈಜಲ್ ರಬ್ಬಾನಿ ಬಂಧಿತರು .ಈ ತಂಡದ ಮುಖ್ಯಸ್ಥ ಜುನೈದ್ ನಾಪತ್ತೆಯಾಗಿದ್ದು, ಆತನಿಗಾಗಿ ಬಲೆ ಬೀಸಿದ್ದಾರೆ. ಜನ ಸಂದಣಿ ಇರುವ ಪ್ರದೇಶದಲ್ಲಿ ಬ್ಲ್ಯಾಸ್ಟ್ ನಡೆಸಲು ಇವರು ತಯಾರಿ ನಡೆಸಿದ್ದರು ಎನ್ನಲಾಗಿದೆ.
ಎನ್ ಐಎ (NIA) ಹಾಗೂ ಸಿಸಿಬಿ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿದೆ. ಶಂಕಿತರ ಮೇಲೆ ಹೆಬ್ಬಾಳ (Hebbala) ಠಾಣೆಯಲ್ಲಿ ಸಿಸಿಬಿ ಪ್ರಕರಣ ದಾಖಲಿಸಲಾಗಿದ್ದು, ವಶಕ್ಕೆ ಪಡೆದ ಶಂಕಿತರನ್ನು ಆಡುಗೋಡಿಯ ಟೆಕ್ನಿಕಲ್ ಸೆಲ್ ನಲ್ಲಿ ವಿಚಾರಣೆ ನಡೆಸುತ್ತಿದೆ
ಸುಲ್ತಾಲ್ ಪಾಳ್ಯದ ಸೊಹೈಲ್ ಮನೆ ಹತ್ತಿರ ಶಂಕಿತರು ಸಭೆ ನಡೆಸುತ್ತಿದ್ದಾಗ ಐವರನ್ನು ಬಂಧಿಸಲಾಗಿದೆ. ಬಂಧಿತರಿಂದ ಎರಡು ಸ್ಯಾಟಲೈಟ್ ಫೋನ್, 7 ಕಂಟ್ರಿ ಮೇಡ್ ಪಿಸ್ತೂಲ್ , 42 ಸಜೀವ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.