ಬೆಂಗಳೂರು: ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಯಾಗಿದೆ.
ಉದ್ಯೋಗಿಗಳಿಗೆ ಹಾಗೂ ಸರ್ಕಾರಕ್ಕೆ ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರೆಂಟ್ (Arrest Warrent) ಜಾರಿಯಾಗಿದೆ.
ಫಿಎಫ್ಓ ರಿಜಿನಲ್ ಕಮಿಷನರ್ ಷಡಕ್ಷರಿ ಗೋಪಾಲ ರೆಡ್ಡಿ ಪುಲಕೇಶಿ ನಗರ ಪೊಲೀಸರಿಗೆ (Pulakeshinagar Police Station) ಪತ್ರ ಬರೆದಿದ್ದಾರೆ. ಇದೇ ತಿಂಗಳು ನಾಲ್ಕರಂದು ಅರೆಸ್ಟ್ ವಾರೆಂಟ್ ಜಾರಿಯಾಗಿದ್ದು ರಾಬಿನ್ ಉತ್ತಪ್ಪ ಪುಲಕೇಶಿ ನಗರದ ನಿವಾಸಿಯಾಗಿರುವ ಕಾರಣ ಅಲ್ಲಿನ ಠಾಣೆಗೆ ಪತ್ರ ಬರೆಯಲಾಗಿದೆ ಎನ್ನಲಾಗಿದೆ.
ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿಯನ್ನು ಉತ್ತಪ್ಪ ನಡೆಸುತ್ತಿದ್ದಾರೆ. ಆದರೆ, ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಫಿಎಫ್ ಹಣ ಪಾವತಿಸಿಲ್ಲ. ಆದರೆ, ಉದ್ಯೋಗಿಗಳ ಸಂಬಳದಲ್ಲಿ ಪಿಎಫ್ ಹಣ ಕಟ್ ಮಾಡಿಕೊಳ್ಳಲಾಗಿದೆ. ಈ ಮೂಲಕ ಅವರು 23 ಲಕ್ಷ ರೂ. ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.