ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (87th Kannada Sahitya Sammelana) ನಾಳೆಯಿಂದ ಚಾಲನೆ ಸಿಗಲಿದ್ದು, ಈ ಹಿನ್ನೆಲೆಯಲ್ಲಿ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ (Go. Ru. Channabasappa) ಮಂಡ್ಯಕ್ಕೆ ಆಗಮಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು. ಸಚಿವ ಎನ್. ಚಲುವರಾಯಸ್ವಾಮಿ (Chaluvaraya Swamy), ಶಾಸಕರಾದ ಗಣಿಗ ಪಿ.ರವಿಕುಮಾರ್, ರಮೇಶ್ ಬಂಡಿಸಿದ್ದೇಗೌಡ, ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ, ಡಿಸಿ ಡಾ. ಕುಮಾರ್ ಅವರು ಸಮ್ಮೇಳನಾಧ್ಯಕ್ಷರನ್ನು ಸ್ವಾಗತಿಸಿದರು.
ಈ ವೇಳೆ ಮಾತನಾಡಿದ ಸಮ್ಮೇಳನಾಧ್ಯಕ್ಷ ಗೊ.ರು ಚನ್ನಬಸಪ್ಪ, ಕನ್ನಡದ ತವರು ನೆಲದಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಖುಷಿ ತಂದಿದೆ. ಮಂಡ್ಯದಲ್ಲಿ ಕನ್ನಡ ಭಾಷೆ ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಿಲ್ಲ. ಆಧುನಿಕತೆಯ ಪ್ರಭಾವ ಕನ್ನಡದ ಮೇಲಿನ ಅಭಿಮಾನ ಕಡಿಮೆಯಾಗಲು ಕಾರಣ ಎಂದರು.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಾಡು ಮಂಡ್ಯ ಸಜ್ಜಾಗಿದೆ. ಮೂರು ದಶಕಗಳ ನಂತರ ಈ ಸೌಭಾಗ್ಯ ಮಂಡ್ಯಕ್ಕೆ ಸಿಕ್ಕಿದೆ.
ಸ್ಯೋಂಜೋ ಆಸ್ಪತ್ರೆಯ ಹಿಂಭಾದ 130 ಎಕರೆ ಪ್ರದೇಶದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.








