ಶಿವಮೊಗ್ಗ: ವ್ಯಕ್ತಿಯೊಬ್ಬರನ್ನು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಆಸ್ತಿ ವಿಚಾರಕ್ಕೆ ಜಗಳ ಆರಂಭವಾಗಿ ಅದು ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. ಆಸ್ತಿ ವಿಚಾರಕ್ಕಾಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ನಡೆದಿರುವುದು ಶಿವಮೊಗ್ಗದ (Shivamogga) ಬೆಳಲಕಟ್ಟೆ ಗ್ರಾಮದ ಚಾನಲ್ ಹತ್ತಿರ ನಡೆದಿದೆ.
ಗ್ರಾಮದ ಮಹೇಶಪ್ಪ(60) ಕೊಲೆಯಾಗಿರುವ ವ್ಯಕ್ತಿ ಎನ್ನಲಾಗಿದೆ. ಬಿಕ್ಕೋನಹಳ್ಳಿಯ ಮಗಳ ಮನೆಯಿಂದ ಮಹೇಶಪ್ಪ ಬರುತ್ತಿದ್ದ ಸಂದರ್ಭದಲ್ಲಿ ಅಡ್ಡಗಟ್ಟಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಬೆಳಲಕಟ್ಟೆ ಗ್ರಾಮದ ಕುಮಾರ್ ಹಾಗೂ ಕಾರ್ತಿಕ್ ಆರೋಪಿಗಳು ಎನ್ನಲಾಗಿದೆ.
ಆಸ್ತಿ ಮಾರಾಟ ವಿಷಯಕ್ಕೆ ಸಂಬಂಧಿಸಿದಂತೆ ಮಹೇಶಪ್ಪ ಹಾಗೂ ಕುಮಾರ್ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಸದ್ಯ ಸ್ಥಳಕ್ಕೆ ಪೊಲೀಸರು ಪರಿಶೀಲನೆ ನಡೆಸಿ, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.