ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಅ.08 ರಿಂದ 10 ದಿನಗಳ ಕಾಲ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ

1 min read

ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಅ.08 ರಿಂದ 10 ದಿನಗಳ ಕಾಲ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ

ಬೆಂಗಳೂರು : ನಾಡ ಹಬ್ಬ ದಸರಾ ಅಂಗವಾಗಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಅಕ್ಟೋಬರ್‌ 08 ರಿಂದ 10 ದಿನಗಳ ಕಾಲ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಚಿತ್ತಾರ ಹಾಗೂ ಗ್ರಾಂಡ್‌ ಫ್ಲಿಯಾ ಮಾರ್ಕೇಟ್‌ ಸಹಯೋಗದಲ್ಲಿ ಆಯೋಜಿಸಲಾಗಿರುವ ಈ ಮಾರಾಟ ಮೇಳದಲ್ಲಿ ದಸರಾ ಆಲಂಕಾರಕ್ಕೆ ಬೇಕಾಗಿರುವ ವಿಶೇಷ ಗೊಂಬೆಗಳು ಹಾಗೂ ಇನ್ನಿತರ ವಸ್ತುಗಳ ಒಂದೇ ವೇದಿಕೆಯ ಅಡಿಯಲ್ಲಿ ದೊರೆಯಲಿವೆ.

ಪ್ರತಿ ದಸರಾ ಸಂಧರ್ಭದಲ್ಲೂ ತಮ್ಮ ಬೊಂಬೆಗಳ ಸಂಗ್ರಹದಲ್ಲಿ ಹೊಸತನ ಕಾಪಾಡುವ ನಿಟ್ಟಿನಲ್ಲಿ ಗ್ರಾಹಕರು ಕೆಲವೊಂದು ಗೊಂಬೆಗಳನ್ನು ಖರೀದಿಸುವುದು ನಡೆದು ಬಂದಿರುವ ಸಂಪ್ರದಾಯ. ಇಂತಹ ಸಂಪ್ರದಾಯಕ್ಕೆ ಪುಷ್ಠಿ ಕೊಡುವ ನಿಟ್ಟಿನಲ್ಲಿ ಹಾಗೂ ದಸರಾ ಹಬ್ಬಕ್ಕೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ಒಂದೇ ವೇದಿಕೆಯಡಿಯಲ್ಲಿ ಸಿಗುವ ರೀತಿಯಲ್ಲಿ ಮಾಡುವ ದೃಷ್ಟಿಯಿಂದ ಅಕ್ಟೋಬರ್‌ 8 ರಿಂದ 17 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ‌ ಇಂಡಿಯನ್‌ ಆರ್ಟಿಸನ್ಸ್‌ ಕರಕುಶಲ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ.

ಈ ಪ್ರದರ್ಶನ ಹಾಗೂ ಮಾರಾಟ ಮೇಳದ ಪ್ರಮುಖ ಆಕರ್ಷಣೆ ದಸರಾ ಗೊಂಬೆಗಳು. ಈ ಬಾರಿ ಒಂದೇ ವೇದಿಕೆಯ ಅಡಿಯಲ್ಲಿ ಎಲ್ಲಾ ರೀತಿಯ ಹಾಗೂ ವಿಭಿನ್ನ ಆಯಾಮದ ಗೊಂಬೆಗಳನ್ನು ಖರೀದಿಸಬಹುದಾಗಿದೆ. ಇದರ ಜೊತೆಯಲ್ಲಿಯೇ ಹಬ್ಬಕ್ಕೆ ಬೇಕಾಗಿರುವ ಎಲ್ಲಾ ರೀತಿಯ ಸಾಮಗ್ರಿಗಳನ್ನು ಇಲ್ಲಿ ಕೊಳ್ಳಬಹುದಾಗಿದೆ. ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ. 80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ.

ತೂಕ ಕಡಿಮೆ ಮಾಡಿಕೊಳ್ಳಲು ಈ ರುಚಿಕರ ಆಹಾರಗಳು ನಿಜಕ್ಕೂ ಉಪಯೋಗಕಾರಿ

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd