ಕೋವಿಡ್ ಸಂಕಷ್ಟ – ರೋಗಿಗಳಿಗೆ ನೆರವಾದ ಸ್ಯಾಂಡಲ್ ವುಡ್ ನ ಯುವ ನಟ
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಇದೀಗ ಕನ್ನಡದ ಯುವ ನಟ ಅರುಣ್ ಗೌಡ ಅವರು ಕೊರೊನಾ ಸಂಕಷ್ಟದಲ್ಲಿ ಸಹಾಯಕ್ಕೆ ಮುಂದೆ ಬಂದಿದ್ದಾರೆ. ತಮ್ಮ ಕೈಲಾದ ಅಳಿಲು ಸೇವೆ ಮಾಡ್ತಿದ್ಧಾರೆ. ಕೊರೊನಾ ಸಮಯದಲ್ಲಿ ತಮ್ಮ ವಾಹವನ್ನು ಉಚಿತವಾಗಿ ಆಮ್ಲಜನಕ ಸಾಗಣೆ, ಔಷಧ ಸಾಗಣೆ ಇತರೆ ಕಾರಣಗಳಿಗೆ ಬಳಸಿಕೊಳ್ಳಲು NGO ಒಂದಕ್ಕೆ ಕೊಟ್ಟಿದ್ದಾರೆ. ತಮ್ಮ ಟಾಟಾ ಏಸ್ ವಾಹವನ್ನು ಎನ್‌ಜಿಓಗೆ ನೀಡಿದ್ದಾರೆ. ಅಂದ್ಹಾಗೆ ಅರುಣ್ ಗೌಡ ಪುನೀತ್ ರಾಜ್ ಕುಮಾರ್ ನಟನೆಯ ‘ಯುವರತ್ನ’ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದರು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








