ಬೆಂಗಳೂರು: ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲವು ಸಾಧಿಸಿದ ಬೆನ್ನಲ್ಲೇ ರಾಜ್ಯ ಬಿಜೆಪಿ ಉಸ್ತುವಾರಿಗೆ ಹೈಕಮಾಂಡ್ ಮೇಜರ್ ಸರ್ಜರಿ ಮಾಡಲಾಗಿದೆ.

ಕಳೆದ ನಾಲ್ಕೈದು ವರ್ಷಗಳಿಂದ ರಾಜ್ಯ ಬಿಜೆಪಿ ಉಸ್ತುವಾರಿಯಾಗಿದ್ದ ಪಿ.ಮುರಳೀಧರ ರಾವ್ ಅವರನ್ನು ಎತ್ತಂಗಡಿ ಮಾಡಲಾಗಿದ್ದು, ಮುರಳೀಧರರಾವ್ ಸ್ಥಾನಕ್ಕೆ ಹಿರಿಯ ಮುಖಂಡ ಅರುಣ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಅರುಣ್ ಸಿಂಗ್ ಜತೆ ಜತೆಗೆ ಡಿ.ಕೆ ಅರುಣಾ ಅವರನ್ನು ಕರ್ನಾಟಕದ ಸಹ ಉಸ್ತುವಾರಿಯಾಗಿ ನೇಮಿಸಲಾಗಿದೆ. ಹಿಂದಿನ ಉಸ್ತುವಾರಿ ಪಿ.ಮುರಳೀಧರ ರಾವ್ ಅವರಿಗೆ ಮಧ್ಯಪ್ರದೇಶದ ಉಸ್ತುವಾರಿಯಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಸಮಿತಿ ಆದೇಶ ಹೊರಡಿಸಿದೆ.
ಸಿ.ಟಿ ರವಿಗೆ ಮಹಾರಾಷ್ಟ್ರ ಉಸ್ತುವಾರಿ..
ಇತ್ತೀಚೆಗಷ್ಟೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಸಿ.ಟಿ ರವಿ ಅವರ ರಾಜ್ಯಗಳ ಉಸ್ತುವಾರಿ ಜವಾಬ್ದಾರಿಯನ್ನು ಬದಲಾವಣೆ ಮಾಡಲಾಗಿದೆ.

ಸಿ.ಟಿ ರವಿ ಅವರಿಗೆ ತಮಿಳುನಾಡು, ಗೋವಾ ಜತೆಗೆ ಮಹಾರಾಷ್ಟ್ರದ ಉಸ್ತುವಾರಿಯ ಹೆಚ್ಚುವರಿ ಹೊಣೆ ನೀಡಲಾಗಿದೆ. ಕಳೆದ ತಿಂಗಳು ಸಿ.ಟಿ ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದಾಗ ದಕ್ಷಿಣ ಭಾರತದ ರಾಜ್ಯಗಳು ಉಸ್ತುವಾರಿ ನೀಡಲಾಗಿತ್ತು. ಈಗ ಅದರಲ್ಲೂ ಕೊಂಚ ಬದಲಾವಣೆ ಮಾಡಿ ತಮಿಳುನಾಡು, ಗೋವಾ ಹಾಗೂ ಮಹಾರಾಷ್ಟ್ರದ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.
ರಾಜ್ಯದ ಇನ್ನೊಬ್ಬ ಹಿರಿಯ ನಾಯಕ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಕೇರಳದ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದ್ದು, ನಿರ್ಮಲ್ ಕುಮಾರ್ ಸುರಾನ ಅವರನ್ನು ಪುದುಚೇರಿ ರಾಜ್ಯದ ಬಿಜೆಪಿ ಉಸ್ತುವಾರಿಯ ಜವಾಬ್ದಾರಿ ನೀಡಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








