Arun Singh | ಬಿಎಸ್ ವೈ ನಿರ್ಲಕ್ಷ್ಯ ಇಲ್ಲ.. ಅವರು ರಾಜ್ಯದ ದೊಡ್ಡ ನಾಯಕ
ಬೆಳಗಾವಿ : ಕರ್ನಾಟಕದಲ್ಲಿ ಪ್ರಚಂಡ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅರುಣ್ ಸಿಂಗ್, ಬಿಜೆಪಿಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನ ನಿರ್ಲಕ್ಷ್ಯ ಮಾಡುತ್ತಿಲ್ಲ. ಅವರು ವಿಜಯ ಸಂಕಲ್ಪ ಯಾತ್ರೆಯಲ್ಲಿ ಹೋಗುತ್ತಿದ್ದಾರೆ.
ಅವರು ನಾಲ್ಕು ಬಾರಿ ಸಿಎಂ ಆಗಿದ್ದಾರೆ. ಅನೇಕ ಬಾರಿ ವಿರೋಧ ಪಕ್ಷದ ನಾಯಕರಾಗಿದ್ದರು.
ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕದ ಬಹಳ ದೊಡ್ಡ ಮತ್ತು ಜನಪ್ರಿಯ ನಾಯಕರಾಗಿದ್ದಾರೆ.

ಯಡಿಯೂರಪ್ಪ ಅವರು ರಾಜ್ಯಾದ್ಯಂತ ಪ್ರವಾಸ ಮಾಡಿ ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ 150 ಸ್ಥಾನ ಪಡೆಯಲು ಶ್ರಮಿಸುತ್ತಿದ್ದಾರೆ.
ಅವರು ಜನರ ಬಳಿ ಹೋಗುತ್ತಿರುವುದು ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಅರುಣ್ ಸಿಂಗ್ ಹೇಳಿದ್ದಾರೆ.
ಇದೇ ವೇಳೆ ಸಚಿವ ಸಂಪುಟ ಬಗ್ಗೆ ಮಾತನಾಡಿದ ಅರುಣ್ ಸಿಂಗ್, ಸಚಿವ ಸಂಪುಟ ಆದಷ್ಟು ಬೇಗ ಆಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಹೇಳಿದ್ದಾರೆ.
ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇವೆ. ರಮೇಶ್ ಜಾರಕಿಹೊಳಿ ನಮ್ಮ ಸ್ನೇಹಿತರಿದ್ದಾರೆ.
ಜನರ ಕಾಳಜಿ ಉಳ್ಳುವರು ಆಗಿದ್ದಾರೆ, ಹೀಗಾಗಿ ಅವರೊಂದಿಗೆ ಚರ್ಚೆ ಆಗಿದೆ. ಸಾಮಾನ್ಯವಾಗಿ ಎಲ್ಲರೊಂದಿಗೆ ನಮ್ಮ ಚರ್ಚೆ ಆಗುತ್ತದೆ ಎಂದು ತಿಳಿಸಿದರು.