Arun Singh | ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ
ನವದೆಹಲಿ : ಮುಂದಿನ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ.
150 ಕ್ಷೇತ್ರಗಳಲ್ಲಿ ಗೆದ್ದು ಪೂರ್ಣ ಪ್ರಮಾಣದಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬರಲಿದ್ದೇವೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ರಾಜ್ಯದಲ್ಲಿ ಚುನಾವಣೆಗೂ ಮುನ್ನಾ ಬಸವರಾಜ ಬೊಮ್ಮಾಯಿ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂಬ ಸುದ್ದಿ ರಾಜ್ಯ ರಾಜಕೀಯವಲಯದಲ್ಲಿ ಹರಿದಾಡುತ್ತಿದೆ.
ಈ ಹಿನ್ನೆಲೆಯಲ್ಲಿ ಇದಕ್ಕೆ ಸ್ಪಷ್ಟನೆ ನೀಡಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ.
ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ರೈತರ ಪರವಾಗಿ, ಯುವ ಸಮೂಹದ ಪರವಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ.

ಅವರೊಬ್ಬ ಕಾಮನ್ ಮ್ಯಾನ್ ಸಿಎಂ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ.
100% ಬೊಮ್ಮಾಯಿ ನೇತೃತ್ವದಲ್ಲೆ ಮುಂದಿನ ಚುನಾವಣೆ ಎದುರಿಸುತ್ತೇವೆ. ೧೫೦ ಕ್ಷೇತ್ರಗಳಲ್ಲಿ ಗೆದ್ದು ಪೂರ್ಣ ಪ್ರಮಾಣದಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬರಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ಗುಡುಗಿದ ಅರುಣ್ ಸಿಂಗ್, ಕಾಂಗ್ರೆಸ್ ಗೊಂದಲ ಹುಟ್ಟು ಹಾಕುತ್ತಿದೆ.
ಸಿಎಂ ಬದಲಾವಣೆ ಎನ್ನುವುದು ಕಾಂಗ್ರೆಸ್ ಷಡ್ಯಂತ್ರ, ಸಿದ್ದರಾಮಯ್ಯ ಡಿಕೆಶಿ ನಡುವೆ ಒಡಕಿದೆ.
ಅದನ್ನು ಮುಚ್ಚಿ ಹಾಕಲು ಸಿಎಂ ಬದಲಾವಣೆ ವಿಚಾರ ಹುಟ್ಟು ಹಾಕಿದ್ದಾರೆ. ಕಾಂಗ್ರೆಸ್ ನಾಯಕರೇ ಇಲ್ಲದ ಪಕ್ಷ ಎಂದು ಹೇಳಿದರು.
ಇದನ್ನೂ ಓದಿ : Santosh Hegde | ಮೂರು ಪಕ್ಷಗಳಲ್ಲೂ ಭ್ರಷ್ಟಾಚಾರಿಗಳಿದ್ದಾರೆ