Arun Singh | ಯತ್ನಾಳ್ ನಮ್ಮ ಪಕ್ಷದ ನಾಯಕರಲ್ಲ
ಹುಬ್ಬಳ್ಳಿ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಪಕ್ಷದ ನಾಯಕರಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್ ಅವರು ಪದೇ ಪದೇ ಪಕ್ಷಕ್ಕೆ ಮುಜುಗರ ಉಂಟು ಮಾಡುವ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ.
ಅದರಲ್ಲೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಸರಣಿ ಆರೋಪಗಳನ್ನು ಮಾಡುತ್ತಲೇ ಇರುತ್ತಾರೆ.
ಈ ಬಗ್ಗೆ ಸುದ್ದಿಗಾರರು ಅರುಣ್ ಸಿಂಗ್ ಅವರಿಗೆ ಪ್ರಶ್ನೆಗಳನ್ನು ಗೈದಿದ್ದು, ಇದಕ್ಕೆ ಅವರು “ ಯತ್ನಾಳ್ ನಮ್ಮ ಪಕ್ಷದ ನಾಯಕರಲ್ಲ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಯತ್ನಾಳ್, ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ಕೋರ್ ಕಮಿಟಿಯಲ್ಲಿ ಇಲ್ಲ. ಅವರು ನೀಡುವ ಹೇಳಿಕೆಗಳು ಪಕ್ಷದ ಹೇಳಿಕೆಗಳಲ್ಲ.
ನಾವು ಯತ್ನಾಳ್ ಅವರಿಎ ನೋಟೀಸ್ ಜಾರಿ ಮಾಡಿ ಉತ್ತರ ಪಡೆದಿದ್ದೇವೆ.
ಯತ್ನಾಳ್ ಸ್ವಭಾವವೇ ಹಾಗಿದೆ ಏನೂ ಮಾಡಲು ಆಗಲ್ಲ, ನೋಡೋಣ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಅಲ್ಲದೇ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, 150 ಸೋಟುಗಳನ್ನು ನಾವು ಗೆಲ್ಲುತ್ತೇವೆ ಎಂದರು.