ದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಬಕಾರಿ ನೀತಿ ಪ್ರಕರಣದಲ್ಲಿ ನೀಡಿದ್ದ ಜಾರಿ ನಿರ್ದೇಶನಾಲಯದ ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ಸಂಚಾಲಕರ ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಲಿದೆ. ಅಬಕಾರಿ ನೀತಿ ಸಂಬಂಧಿಸಿದಂತೆ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 21ರಂದು ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ಭಾನುವಾರ ಕೇಂದ್ರ ಸಂಸ್ಥೆ ಒಂಬತ್ತನೇ ಸಮನ್ಸ್ ಜಾರಿ ಮಾಡಿತ್ತು.
ಈ ಪ್ರಕರಣದಲ್ಲಿ ಹಿಂದಿನ ಎಂಟು ಸಮನ್ಸ್‌ಗಳಲ್ಲಿ 6ಕ್ಕೆ ಕೇಜ್ರಿವಾಲ್ ಗೈರಾಗಿದ್ದು, ಇಡಿ ವಿರುದ್ಧ ಸಲ್ಲಿಸಿದ ಎರಡು ದೂರುಗಳ ಮೇಲೆ ದೆಹಲಿ ನ್ಯಾಯಾಲಯವು ದೆಹಲಿ ಸಿಎಂಗೆ ಜಾಮೀನು ನೀಡಿದ ಒಂದು ದಿನದ ನಂತರ ಸಮನ್ಸ್ ಜಾರಿಯಾಗಿದೆ. ಕಳೆದ ಆರು ತಿಂಗಳಲ್ಲಿ ಕೇಜ್ರಿವಾಲ್‌ಗೆ ಒಂಬತ್ತು ಸಮನ್ಸ್‌ಗಳನ್ನು ನೀಡಲಾಗಿದೆ. ಕೆಲವು ಕಾರಣಗಳನ್ನು ಹೇಳುತ್ತಾ ಅವೆಲ್ಲದಕ್ಕೂ ಗೈರಾಗಿದ್ದಾರೆ.