ದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಕೊನೆಗೂ ನ್ಯಾಯಾಲಯದ ಎದುರು ಹಾಜರಾಗಿದ್ದಾರೆ.
ಫೆ. 17ರಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ. ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಸಿದಂತೆ ಕೇಜ್ರಿವಾಲ್ ಅವರಿಗೆ ಇಡಿ 6 ಬಾರಿ ಸಮನ್ಸ್ ಜಾರಿ ಮಾಡಿತ್ತು. ಆದರೆ, ಅರವಿಂದ್ ಕೇಜ್ರಿವಾಲ್ ಒಂದಕ್ಕೂ ಉತ್ತರಿಸಿರಲಿಲ್ಲ. ಹೀಗಾಗಿ ಕೋರ್ಟ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಆದೇಶ ನೀಡಿತ್ತು.