ಡ್ರಗ್ ಲಿಂಕ್ ಕೇಸ್ ನಲ್ಲಿ ಸುಮಾರು 15 ದಿನಗಳ ಕಾಲ ಸೆರೆವಾಸ ಅನುಭವಿಸಿ ಆ ನಂತರ ಜೈಲಿನಿಂದ ರಿಲೀಸ್ ಆಗಿದ್ದ ಬಾಲಿವುಡ್ ನ ಸ್ಟಾರ್ ನಟ ಶಾರುಕ್ ಪುತ್ರನಿಗೆ ಇತ್ತೀಚೆಗೆ ಕ್ಲೀನ್ ಚಿಟ್ ಸಿಕ್ಕಿದೆ..
ಇದೀಗ ಆರ್ಯನ್ ಖಾನ್, ವಿಶೇಷ ಎನ್ ಡಿಪಿಎಸ್ ನ್ಯಾಯಾಲಯಕ್ಕೆ ತಮ್ಮ ಪಾಸ್ಪೋರ್ಟ್ ಹಿಂತಿರುಗಿಸುವಂತೆ ಮನವಿ ಸಲ್ಲಿಸಿದ್ದಾರೆ. ಈ ವಿಷಯದಲ್ಲಿ ಉತ್ತರಿಸುವಂತೆ ಮಾದಕ ವಸ್ತುಗಳ ನಿಯಂತ್ರಣ ಘಟಕಕ್ಕೆ (ಎನ್ಸಿಬಿ) ಸೂಚನೆ ನೀಡಿರುವ ನ್ಯಾಯಾಲಯವು ವಿಚಾರಣೆಯನ್ನು ಜುಲೈ 13ಕ್ಕೆ ಮುಂದೂಡಿದೆ.
ಕಳೆದ ವರ್ಷ ಅಕ್ಟೋಬರ್ 3ರಂದು ಡ್ರಗ್ಸ್ ಪ್ರಕರಣದಲ್ಲಿ 24 ವರ್ಷದ ಆರ್ಯನ್ ಖಾನ್ ಅವರನ್ನು ಎನ್ಸಿಬಿ ಬಂಧಿಸಿತ್ತು. 20 ದಿನಗಳ ಕಾಲ ಜೈಲಿನಲ್ಲಿ ಕಳೆದಿದ್ದ ಆರ್ಯನ್ ಖಾನ್ ಅವರಿಗೆ ಬಾಂಬೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಪಾಸ್ಪೋರ್ಟ್ ಸಲ್ಲಿಸಿದ್ದರು.