ವಿಜಯಪುರ: ನಾನು ಆಡಳಿತಾರೂಡ ಬಿಜೆಪಿ ಶಾಸಕ. ಬಿಜೆಪಿ ಶಾಸಕನಾದ ನನ್ನ ಕ್ಷೇತ್ರಕ್ಕೆ 100ಕೋಟಿ ಅನುದಾನ ಕೊಟ್ಟಿಲ್ಲ. ಆದ್ರೆ, ಪ್ರತಿಪಕ್ಷ ಕಾಂಗ್ರೆಸ್ ಶಾಸಕ ಜಮೀರ್ ಆಹ್ಮದ್ ಕೇಳಿದ್ರು ಅಂತ 200ಕೋಟಿ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಕಿಡಿಕಾರಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಅವನು ಹಿಂದುಗಳನ್ನು ನಾಶ ಮಾಡುತ್ತಾನೆ, ಸಬ್ ಕೋ ಖತಂ ಕರೆಂಗೆ ಎಂದಿದ್ದಕ್ಕೆ ಅನುದಾನ ನೀಡುತ್ತಾರೆ. ಅದೇ ಹಿಂದೂಗಳ ಪರ ಮಾತನಾಡುವವರಿಗೆ ಭದ್ರತೆ ಹಿಂಪಡೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನು ಅಭಿವೃದ್ದಿ ಬಗ್ಗೆ ಮಾತನಾಡಿದ್ದಕ್ಕೆ ನನಗೆ ನೀಡಿದ್ದ ಭದ್ರತೆ ಹಿಂಪಡೆದಿದ್ದಾರೆ. ನಾವು ಅನುದಾನ ಕೇಳಿದರೆ ಹಣ ಇಲ್ಲ ಅಂತಾರೆ. ಆದ್ರೆ ಅದೇ ಜಮೀರ್ ಅಹ್ಮದಖಾನ್ ಕೇಳಿದರ ಹಣ ನೀಡುತ್ತಾರೆ. ಅಲ್ಲದೆ ನಾಲ್ಕೈದು ಜನ ಕಾಂಗ್ರೆಸ್ ಶಾಸಕರಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ಇದನ್ನು ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇನೆ ಎಂದು ಯತ್ನಾಳ್ ಅಸಮಾಧಾನ ಹೊರಹಾಕಿದ್ದಾರೆ.
ಹಿಂದೂಗಳನ್ನು ವಿರೋಧಿಸುವವರಿಗೆ ರೂ. 200 ಕೋಟಿ ನೀಡ್ತಾರೆ. ರಾಮ, ಸೀತೆ, ಬ್ರಹ್ಮ, ಸರಸ್ವತಿ, ಬಗ್ಗೆ ಹಿಂದೂ ದೇವತೆಗಳಿಗೆ ಅಪಮಾನ ಮಾಡಿದವರಿಗೆ ಸಚಿವ ಸ್ಥಾನ ನೀಡ್ತಾರೆ ಎಂದು ಸಚಿವ ಮುರುಗೇಶ್ ನಿರಾಣಿ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಶಾಸಕ ಜಮೀರ್ ಕ್ಷೇತ್ರಕ್ಕೆ ಯಾವುದೇ ಅನುದಾನ ಕೊಟ್ಟಿಲ್ಲ ಎಂದು ಸಿಎಂ ಬಿಎಸ್ವೈ ನಿನ್ನೆ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟನೆ ನೀಡಿದ್ದರು. ಇದರ ಬೆನ್ನಲೇ ಯತ್ನಾಳ್ ಆರೋಪಿಸಿದ್ದಾರೆ.
ಶೆಟ್ಟರ್ಗೆ ಯತ್ನಾಳ್ ಟಾಂಗ್..
ಜಗದೀಶ್ ಶೆಟ್ಟರ್ ಅವರಂತೆ ನಾನೇನು ಕೀಳು ರಾಜಕಾರಣ ಮಾಡುವುದಿಲ್ಲ. ನಾನೇನು ಸಿಎಂ ಆದ ಬಳಿಕ ಸಚಿವನಾಗಿಲ್ಲ, ಅವರು ಸಚಿವರಾಗುವ ಅವಶ್ಯಕತೆ ಇರಲಿಲ್ಲ, ಯುವಕರಿಗೆ ಅವಕಾಶ ನೀಡಬಹುದಿತ್ತು ಎಂದು ಜಗದೀಶ ಶೆಟ್ಟರ್ಗೆ ಯತ್ನಾಳ್ ನೀಡಿದ್ದಾರೆ.
ನಾನೆಂದೂ ಲಾಬಿ ಮಾಡಿಲ್ಲ..
ನಾನ್ಯಾರ ಬಳಿಯೂ ಸಚಿವ ಸ್ಥಾನ ನೀಡುವಂತೆ ಕೇಳಿಲ್ಲ, ಶೆಟ್ಟರ್ ಸುಮ್ಮನೆ ನನ್ನ ಬಗ್ಗೆ ಮಾತನಾಡಬಾರದು, ನನ್ನ ಬಳಿ ಬಹಳ ಜನರ ಇತಿಹಾಸವಿದೆ. ಈಶ್ವರಪ್ಪ ನನ್ನ ಬಗ್ಗೆ ಮಾತನಾಡಬಾರದು, ನಾನೆಂದೂ ಸಚಿವರನ್ನಾಗಿ ಮಾಡಿ ಅಂತ ಈಶ್ವರಪ್ಪ ಅವರ ಬಳಿ ಹೋಗಿಲ್ಲ, ನಾನೆಂದೂ ಲಾಬಿ ಮಾಡಿಲ್ಲ, ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ ನನ್ನನ್ನು ಬಿಜೆಪಿಯಿಂದ ಆರು ವರ್ಷ ಉಚ್ಛಾಟಿಸಿದ್ದರಿಂದ ಜೆಡಿಎಸ್ ಸೇರಿದ್ದೆ. ಅದನ್ನು ಬಿಟ್ಟು ಮನೆಯಲ್ಲಿ ಕುಳಿತುಕೊಳ್ಳಲಿಲ್ಲ.
ನಾನು ತಾವತ್ತಾದರೂ ಸಚಿವ ಸ್ಥಾನ ಕೇಳಿದ್ದೀನಾ ಎಂಬ ಬಗ್ಗೆ ಯಡಿಯೂರಪ್ಪ ಅವರೇ ಸ್ಪಷ್ಟಪಡಿಸಲಿ. ನನ್ನ ಮಾತಿಗೆ ಸಿಎಂ ಉತ್ತರಿಸಲ್ಲ, ಸಚಿವರ ಮೂಲಕ ಉತ್ತರ ಕೊಡಿಸುತ್ತಾರೆ. ಪಕ್ಷದಲ್ಲಿದ್ದ ಅನಂತಕುಮಾರ ಅವರಂಥ ಒಳ್ಳೆಯವರು ಹೋಗಿದ್ದಾರೆ. ನಮ್ಮಂಥ ಪ್ರಾಮಾಣಿಕರು ಒದರಾಡುತ್ತ ಹೋಗುವಂತಾಗಿದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಕರ್ನಾಟಕದ ವಿಚಾರಗಳನ್ನು ದೆಹಲಿಗೆ ಮುಟ್ಟಿಸುವವರೇ ಇಲ್ಲದಂತಾಗಿದೆ ಎಂದು ಯತ್ನಾಳ್ ಪಕ್ಷದ ಮುಖಂಡರ ವಿರುದ್ಧ ಹರಿಹಾಯ್ದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel