ಬೆಂಗಳೂರು: ಮಂಡ್ಯದಲ್ಲಿ (Mandya) ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ (Kannada Sahithya Sammelana) ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ.ರು ಚನ್ನಬಸಪ್ಪ (ಗೊ.ರು.ಚ) (Go.Ru Channabasappa) ಆಯ್ಕೆಯಾಗಿದ್ದಾರೆ.
ಕರ್ನಾಟಕ ಪ್ರಗತಿಪಥ, ಸಾಕ್ಷಿಕಲ್ಲು, ಬಾಗೂರು ನಾಗಮ್ಮ, ಗ್ರಾಮಗೀತೆಗಳು, ಕರ್ನಾಟಕ ಜನಪದ ಕಲೆಗಳು, ಹೊನ್ನ ಬಿತ್ತೇವು ಸೇರಿದಂತೆ ಹಲವು ಕೃತಿಗಳನ್ನು ರಚಿಸಿರುವ ಚನ್ನಬಸಪ್ಪ ಅವರು ಈ ಹಿಂದೆ 1992 ರಿಂದ 1995 ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದರು. ಮೂರು ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಅವರು ನಡೆಸಿ ಕೊಟ್ಟಿದ್ದರು.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಗೊಂಡೇದಹಳ್ಳಿಯಲ್ಲಿ ರುದ್ರಪ್ಪಗೌಡರು-ಅಕ್ಕಮ್ಮ ದಂಪತಿಗಳಿಗೆ ಪುತ್ರರಾಗಿ ಮೇ 18 1930 ರಂದು ಜನಿಸಿದ್ದರು. 18ನೇ ವಯಸ್ಸಿನಲ್ಲೇ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ವೃತ್ತಿಗೆ ಸೇರಿದ್ದರು. ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ಹಿರಿಯ ಸಾಹಿತಿಗಳು ಗುರುತಿಸಿಕೊಂಡಿದ್ದರು.