ಲವ್ ಜಿಹಾದ್ ಕಾನೂನು ಸಂವಿಧಾನದ ಅಪಹಾಸ್ಯ : ಓವೈಸಿ
ಹೈದರಾಬಾದ್ : ಬಿಜೆಪಿ ಆಳ್ವಿಕೆ ನಡೆಸುತ್ತಿರುವ ರಾಜ್ಯಗಳಲ್ಲಿ ಲವ್ ಜಿಹಾದ್ ಕುರಿತಾಗಿ ಕಾನೂನುಗಳನ್ನು ತರುವ ಮೂಲಕ ಸಂವಿಧಾನವನ್ನ ಅಪಹಾಸ್ಯ ಮಾಡಲಾಗುತ್ತಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ.
ನಮ್ಮ ಸಂವಿಧಾನದಲ್ಲಿ ಎಲ್ಲಿಯೂ ಲವ್ ಜಿಹಾದ್ ಬಗ್ಗೆ ಯಾವುದೇ ವ್ಯಾಖ್ಯಾನವಿಲ್ಲ. ಆದರೂ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಲವ್ ಜಿಹಾದ್ ನಿಷೇಧ ಕಾನೂನು ತರಲಾಗಿದೆ. ಇದು ಸಂವಿಧಾನವನ್ನು ಅಪಹಾಸ್ಯ ಮಾಡಿದಂತೆ ಎಂದು ಅಸಾದುದ್ದೀನ್ ಓವೈಸಿ ಆರೋಪ ಮಾಡಿದ್ದಾರೆ.
ಒಂದು ವೇಳೆ ಬಿಜೆಪಿಯವರು ಕಾನೂನುಗಳನ್ನು ತರಲೇಬೇಕೆಂದು ಬಯಸಿದ್ರೆ ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಖಾತರಿಪಡಿಸುವುದು ಹಾಗೂ ಜನರಿಗೆ ಉದ್ಯೋಗ ಸೃಸ್ಠಿಸುವ ಕಾನೂನುಗಳನ್ನು ಜಾರಿಗೆ ತರಲಿ ಎಂದು ಪುಕ್ಕಟ್ಟೆ ಸಲಹೆ ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ 2 ವರ್ಷದ ಮಗುವಿಗೆ ರೂಪಾಂತರಿ ಕೊರೊನಾ ಸೋಂಕು
ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಓವೈಸಿ, ಭಾರತ ಸಂವಿಧಾನದ 21, 14 ಮತ್ತು 25ನೇ ವಿಧಿ ಅನ್ವಯ ದೇಶದ ಯಾವುದೇ ನಾಗರಿಕರ ವೈಯಕ್ತಿಕ ಜೀವನದಲ್ಲಿ ಪ್ರವೇಶಿಸಲು ಸರ್ಕಾರಕ್ಕೆ ಯಾವುದೇ ಹಕ್ಕಿಲ್ಲ.
ಇಂತಹ ಕಾನೂನುಗಳನ್ನು ಜಾರಿ ಮಾಡುವ ಮೂಲಕ ಸಂವಿಧಾನದ ಅಡಿಯಲ್ಲಿ ಜನತೆಯ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದಂತೆ ಆಗುತ್ತದೆ ಎಂದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel