ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಗುಂಡಿನ ದಾಳಿ Saaksha Tv
ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಕಾರಿನ ಮೇಲೆ ಗುಂಡು ಹಾರಿಸಿದ ಘಟನೆ ಇಂದು ದೆಹಲಿ-ಮೀರತ್ ಇ-ವೇನಲ್ಲಿ ಛಜರ್ಸಿ ಟೋಲ್ ಬಳಿ ನಡೆದಿದೆ.
ಉತ್ತರಪ್ರದೇಶದ ಮೀರತ್ ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಓವೈಸಿ ವಾಹನದ ಮೇಲೆ 3-4 ಸುತ್ತು ಗುಂಡು ಹಾರಿಸಲಾಗಿದೆ. ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಸಂಬಂಧ ಟ್ವೀಟ್ ಮಾಡಿರುವ ಓವೈಸಿ, ಎಲ್ಲರೂ ಸುರಕ್ಷಿತವಾಗಿರುವುದಾಗಿ ಮಾಹಿತಿ ನೀಡಿದ್ದಾರೆ.
ಒಟ್ಟು 3 ರಿಂದ 4 ಜನರಿದ್ದರು. ಅದರಲ್ಲಿ 2 ಜನರು ಗುಂಡಿನ ದಾಳಿ ನಡೆಸಿದರು. ವಾಹನದ ಟೈರ್ ಪಂಕ್ಚರ್ ಆದ ಕಾರಣ ಓವೈಸಿ ಬೇರೆ ವಾಹನದಲ್ಲಿ ಹೋಗಬೇಕಾಯಿತು. ಇದಲ್ಲದೇ, ಯುಪಿಯಲ್ಲಿ ತಮ್ಮ ಬೆಂಗಾವಲು ಪಡೆಯ ಮೇಲೆ ನಡೆದ ದಾಳಿಯನ್ನು ‘ಯೋಜಿತ’ ಎಂದು ವಿವರಿಸಿರುವ ಓವೈಸಿ ತನಿಖೆಗೆ ಒತ್ತಾಯಿಸಿದರು.
ದಾಳಿ ಮಾಡಿದ ಒಬ್ಬನನ್ನು ಬಂಧಿಸಲಾಗಿದೆ. ಗುರುವಾರದಂದು ನಡೆದ ಘಟನೆಗೆ ಸಂಬಂಧಿಸಿದಂತೆ ಮತ್ತೋರ್ವನನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ವಿಚಾರಣೆ ನಡೆಯುತ್ತಿದೆ ಎಂದು ಉತ್ತರ ಪ್ರದೇಶ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಿಂದೂ ವಿರೋಧಿ ಹೇಳಿಕೆಗಳಿಂದ ಮನನೊಂದ ಅಸಾದುದ್ದೀನ್ ಓವೈಸಿ ಮೇಲೆ ಹಲ್ಲೆ ನಡೆಸಿರುವುದಾಗಿ ವಿಚಾರಣೆ ವೇಳೆ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ.