ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಅಸಾನಿ ಚಂಡಮಾರುತ ಸೃಷ್ಟಿಯಾಗಿದ್ದು, ಪರಿಣಾಮ ರಾಜ್ಯದ ಹಲವಡೆ ಭಾರಿ ಮಳೆ ಸುರಿಯುತ್ತಿದೆ. ಮುಂದಿನ 2-3 ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 10ರಂದು ರಾಜ್ಯದಲ್ಲಿ ಭಾರಿ ಮಳೆ ಸುರಿಯಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಸನಿ ಚಂಡಮಾರುತ ಆಂಧ್ರಪ್ರದೇಶದ ವಿಶಾಖಪಟ್ಟಣ, ಒಡಿಶಾದ ಪುರಿಯತ್ತ ಚಲಿಸುತ್ತಿದ್ದು, ಮೇ 10ರಿಂದ ಮೇ 12ರವರೆಗೆ ಈ ಭಾಗದ ಕರಾವಳಿಗಳಲ್ಲಿ ಜೋರು ಮಳೆ ಬೀಳಲಿದೆ ಎಂಬ ಮಾಹಿತಿ ಇದೆ.
ಗಂಟೆಗೆ 100 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಎತ್ತರ ಅಲೆಗಳೇಳುತ್ತಿದ್ದು ಮೀನುಗಾರರು ಸಮುದ್ರಕ್ಕಿಳಿಯದಂತೆ ಹಾಗೂ ಅಕ್ಕಪಕ್ಕದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ತೀವ್ರ ಚಂಡಮಾರುತ ‘ಅಸಾನಿ’ ಮುಂದಿನ 24 ಗಂಟೆಗಳಲ್ಲಿ ಸೈಕ್ಲೋನಿಕ್ ಚಂಡಮಾರುತವಾಗಿ ದುರ್ಬಲಗೊಳ್ಳುವ ಸಾಧ್ಯತೆಯಿದೆ ಮತ್ತು ಉತ್ತರ ಕರಾವಳಿ ಆಂಧ್ರಪ್ರದೇಶದ ಕೆಲವು ಸ್ಥಳಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
Asani to weaken gradually into cyclonic storm over 24 hours; Heavy rainfall likely in Andhra Pradesh and Odisha








