ಅಸಾದುದ್ದೀನ್ ಓವೈಸಿ ‘ರಾಜಕೀಯ ಉಗ್ರ’: ಬಿಜೆಪಿ ಶಾಸಕ ಸುರೇಂದ್ರ ಸಿಂಗ್
ಉತ್ತರಪ್ರದೇಶ : ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಓರ್ವ ‘ರಾಜಕೀಯ ಉಗ್ರ’ ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಚುನಾವಣೋತ್ತರ ಹಿಂಸಾಚಾರದ ಕುರಿತು ಮಾತನಾಡಿದ ಅವರು, ‘ಓವೈಸಿ ಓರ್ವ ರಾಜಕೀಯ ಉಗ್ರ’, ಅವರು ಜನರಿಗೆ ಪ್ರಚೋದನೆ ನೀಡಿದ ಸಮಾಜವನ್ನು ಪಡೆಯುವ ಪ್ರಯತ್ನದಲ್ಲಿ ತೊಡಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಅಲ್ಲದೇ ಪಶ್ಚಿಮ ಬಂಗಾಳವು ಜಮ್ಮು-ಕಾಶ್ಮೀರದ ಹಾದಿಯಲ್ಲಿ ಸಾಗುತ್ತಿದೆ. ಅಲ್ಲಿನ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಪರಿಶೀಲಿಸುತ್ತಿದೆ. ದೇಶದಲ್ಲಿ ಹಿಂದೂಗಳು ಬಹುಸಂಖ್ಯಾತರಾಗಿರುವವರೆಗೆ ಎಐಎಂಐಎಂ ನಾಯಕ ಓವೈಸಿಗೆ ಭಾರತದ ಜಾತ್ಯತೀತತೆಯ ಬಗ್ಗೆ ನಂಬಿಕೆ ಇಡಬೇಕು. ಅಸಾದುದ್ದೀನ್ ಓವೈಸಿ ರಾಜಕೀಯ ಉಗ್ರ. ಅವರು ಸಮಾಜದಲ್ಲಿ ಒಡಕು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ವಿಚಾರದಲ್ಲಿ ಮಾಡಿದ ಆ ಒಂದು ತಪ್ಪಿನಿಂದ ರಾಜೀನಾಮೆ ಕೊಟ್ಟಿದ್ದ ರಮ್ಯಾ…!
ದೇಶದಲ್ಲಿ 4ನೇ ಲಸಿಕೆಯಾಗಿ ಬಳಕೆಯಾಗಲಿದೆ ಅಮೆರಿಕಾದ ‘ಮಡೆರ್ನಾ’
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.