ಅಗತ್ಯವಿರುವ ಮಾಸ್ತ್, ಸ್ಯಾನಿಟೈಜರ್ ನೀಡಿ ಎಂದು ಪ್ರತಿಭಟನೆ ನಡೆಸಿದ ಆಶಾ ಕಾರ್ಯಕರ್ತೆಯರು
ಮೈಸೂರು : ರಾಜ್ಯದಲ್ಲಿ ಆಶಾಕಾರ್ಯಕರ್ತೆಯರ ಮೇಲೆ ನಡೆಯುತ್ತಿರುವ ಹಲ್ಲೆ ಖಂಡಿಸಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಕೊರೊನಾ ವಾರಿಯರ್ಸ್ ಎಂದು ಕರೆಯುವ ಆಶಾ ಕಾರ್ಯಕರ್ತೆಯರಿಗೆ ರಾಜ್ಯದ ಕೆಲವು ಕಡೆ ಹಲ್ಲೆ ಗಳು ಆಗಿರುವ ಘಟನೆಗಳು ನಡೆದಿವೆ. ಆಶಾ ಸಂರಕ್ಷಣಾ ದಿನದ ಅಂಗವಾಗಿ ರಾಜ್ಯವ್ಯಾಪಿ ಹೋರಾಟವನ್ನು ನಡೆಲಾಗುತ್ತಿದೆ.
ಅದರ ಬಾಗಿ ಮೈಸೂರಿನಲ್ಲಿ ಪ್ರತಿಭಟನೆ ಮಾಡಲಾಗಿದೆ. ಪ್ರತಿಭಟನೆ ನಡೆಸಿದ ಆಶಾ ಕಾರ್ಯಕರ್ತೆಯ ಸಂಘದ ಸದಸ್ಯರು ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದವರಿಗೆ ಶಿಕ್ಷೆ ನೀಡಬೇಕು. ಕೋವಿಡ್ ಹಿನ್ನೆಲೆಯಲ್ಲಿ ಆಶಾಕಾರ್ಯಕರ್ತೆಯರಿಗೆ ವಿಶೇಷ ಪ್ಯಾಕೇಜ್ ನೀಡಬೇಕು. ಅಗತ್ಯವಿರುವ ಮಾಸ್ತ್, ಸ್ಯಾನಿಟೈಜರ್ ಸುರಕ್ಷತಾ ಸಾಮಗ್ರಿ ನೀಡಬೇಕು. ಜೊತೆಗೆ 50 ಲಕ್ಷ ವಿಮಾ ಸೌಲಭ್ಯವನ್ನು ಕುಟುಂಬಸ್ಥರಿಗೆ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು








