ಬೆಂಗಳೂರು : ಬ್ಯಾಟರಾಯನಪುರದ ಸಾರಾಯಿ ಪಾಳ್ಯದ ಸಾದಿಕ್ ಲೇಔಟ್ ನಲ್ಲಿ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ವಿಚಾರವಾಗಿ ಮಾಜಿ ಸಚಿವ ಜಮೀರ್ ಖಾನ್ ಪ್ರತಿಕ್ರಿಯೆ ನೀಡಿದ್ದು, ಘಟನೆಯನ್ನು ಸಮರ್ಥನೆ ಮಾಡಿಕೊಳ್ಳುವ ರೀತಿಯಲ್ಲಿ ಮಾತನಾಡಿದ್ದಾರೆ.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದ ಮುಖಂಡರ ಸಭೆ ನಡೆಯಿತು. ಈ ಸಭೆಯಲ್ಲಿ ಪಾಲ್ಗೊಂಡ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಜಮೀರ್ ಅಹಮದ್ ಖಾನ್, ಕೊರೊನಾ ಹಿನ್ನೆಲೆಯಲ್ಲಿ ಆರೋಗ್ಯ ಮಾಹಿತಿ ಪಡೆಯಲು ಆಶಾ ಕಾರ್ಯಕರ್ತರು ಹಾಗೂ ನರ್ಸ್ ತೆರಳಿದ್ದ ವೇಳೆ ಬಡಾವಣೆಯ ಜನತೆ ಸರಿಯಾಗಿ ಮಾಹಿತಿ ಇಲ್ಲದೇ, ತಮ್ಮ ಕುಟುಂಬದವರಿಗೆ ಮಾಹಿತಿ ಕೊಟ್ಟಿದ್ದಾರೆ. ಹೀಗಾಗಿ ಅಲ್ಲಿನವರು ಸಿಎಎ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆಂದು ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದ್ದಾರೆಂದು ಹೇಳಿದ್ದಾರೆ.
ಅಲ್ಲದೇ, ಹೆಲ್ತ್ ಸರ್ವೇ ಮಾಡಲು ಹೋಗಿದ್ದ ನರ್ಸ್ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸರ್ವೇ ಮಾಡಲು ಹೇಳಿದ್ದು ಯಾರು..? ಎಂದು ಪ್ರಶ್ನಿಸಿದ ಅವರು ಸರ್ಕಾರದ ಅನುಮತಿ ಪಡೆದು ಹೋಗಬೇಕಿತ್ತು ಎಂದಿದ್ದಾರೆ.
ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ
ಒಂದು ಕಡೆ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಮಾಧ್ಯಮಗಳು ಶಾಂತಿ ಮಾತುಕತೆಗಳ ಬಗ್ಗೆ ಹೇಳುತ್ತಿದ್ದರೆ, ಇನ್ನೊಂದು ಕಡೆ ಇಸ್ಲಾಮಿಕ್ ರೆವ್ಯೂಲೇಷನರಿ ಗಾರ್ಡ್ ಕಾರ್ಪ್ಸ್ (IRGC) ಇದನ್ನು ಸಂಪೂರ್ಣವಾಗಿ...








