ಆರೋಗ್ಯ ಸೇವೆಗಳ ಜನರಿಗೆ ತಲುಪಿಸಲು ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. 42,000 ಕಾರ್ಯಕರ್ತೆಯರ ಮನವಿಯ ಹೊರತಾಗಿಯೂ ಹಲವಾರು ವರ್ಷಗಳಿಂದ ಭರವಸೆಗಳು ಈಡೇರಿಲ್ಲ. ಹಲವು ಸುತ್ತಿನ ಸಭೆಗಳಾದರೂ ನಿರ್ದಿಷ್ಟ ವೇತನ ನೀಡುವ ಭರವಸೆಗೆ ಖಚಿತವಾಗಿ ಉತ್ತರ ನೀಡಿಲ್ಲ. ಹಾಗಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರು ಇಂದು (ಜ.7) ರಾಜ್ಯದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ತಿಳಿಸಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತರು ಸೋಮವಾರ ರಾತ್ರಿಯೇ ಬೆಂಗಳೂರಿಗೆ ತಲುಪಿದ್ದು, ಇಂದು ಬೆಳಗ್ಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಆರಂಭವಾಗುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದ್ದಾರೆ.
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ
ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...








