ನವದೆಹಲಿ : ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಇಂದು ಗೂಡ್ಸ್ ರೈಲು ಹರಿದು 16 ಕಾರ್ಮಿಕರು ಸಾವನ್ನಪ್ಪಿರುವ ಘಟನೆಯ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿ, ಸಂತಾಪ ವ್ಯಕ್ತಪಡಿಸಿದ್ದಾರೆ.
https://twitter.com/RahulGandhi/status/1258612972890451968
ನನ್ನ ಕಾರ್ಮಿಕರು ಹಾಗೂ ಸಹೋದರರು ಗೂಡ್ಸ್ ರೈಲಿನಡಿ ಸಿಲುಕಿ ಸಾವನ್ನಪ್ಪಿರುವ ಸುದ್ದಿ ಕೇಳಿ ಆಘಾತಕ್ಕೊಳಗಾಗಿದ್ದೇನೆ. ರಾಷ್ಟ್ರನಿರ್ಮಾಣಕಾರರಾಗಿರುವ ವಲಸೆ ಕಾರ್ಮಿಕರು ಹಾಗೂ ದಿನಗೂಲಿ ಕಾರ್ಮಿಕರನ್ನು ದೇಶದಾದ್ಯಂತ ನಡೆಸಿಕೊಳ್ಳುತ್ತಿರುವ ರೀತಿಗೆ ನಾವು ನಾಚಿಕೆಪಡಬೇಕಾಗಿದೆ. ಮೃತ ಕಾರ್ಮಿಕರ ಕುಟುಂಬಗಳಿಗೆ ಸಾಂತ್ವಾನ ಹೇಳುವೆ. ಅಪಘಾತದಲ್ಲಿ ಗಾಯಗೊಂಡವರು ಆದಷ್ಟು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವೆ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.








