ಆಸೀಸ್ ಟೆಸ್ಟ್ ಸರಣಿ | ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ – 25/1
ಅಡಿಲೇಡ್ : ಆಸ್ಟ್ರೇಲಿಯಾ ಹಾಗೂ ಭಾರತ ನಡುವಣ ಮೊದಲ ಪಿಂಕ್ ಬಾಲ್ ಡೇ-ನೈಟ್ ಟೆಸ್ಟ್ ಪಂದ್ಯ ಅಡಿಲೇಡ್ ಓವಲ್ ಮೈದಾನದಲ್ಲಿ ಆರಂಭವಾಗಿದ್ದು, ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ. ಡ್ರಿಂಕ್ಸ್ ಬ್ರೇಕ್ ಗೆ ಭಾರತ 25 ರನ್ ಗಳಿಗೆ ಒಂದು ವಿಕೆಟ್ ಕಳೆದುಕೊಂಡಿದೆ.
ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ ಅಗರ್ ವಾಲ್ ಜೊತೆ ನಿರೀಕ್ಷಿತ ಮಟ್ಟಿಗೆ ಪ್ರದರ್ಶನ ನೀಡಲಿಲ್ಲ. ಆರಂಭದಲ್ಲೇ ಪೃಥ್ವಿ ಶಾ ಮಿಚೆಲ್ ಸ್ಟಾರ್ಕ್ ಗೆ ಕ್ಲೀನ್ ಬೋಲ್ಡ್ ಆಗುವ ಮೂಲಕ ಶೂನ್ಯಕ್ಕೆ ಔಟ್ ಆದ್ರು. ಸದ್ಯ ಮಯಾಂಕ್ ಅಗರ್ ವಾಲ್ (10) ಚೇತೇಶ್ವರ್ ಪೂಜಾರ (14) ಕ್ರೀಸ್ ನಲ್ಲಿದ್ದಾರೆ.
ಪಂದ್ಯದ ಹಿಂದಿನ ದಿನವೇ ಭಾರತ ತಂಡವು ಆಡುವ ಬಳಗವನ್ನು ಘೋಷಿಸಿತ್ತು. ಮೊದಲ ಪಂದ್ಯದ ಬಳಿಕ ತವರಿಗೆ ಮರಳುತ್ತಿರುವ ಕಪ್ತಾನ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಶುಭಮನ್ ಗಿಲ್ ಹಾಗೂ ಕೆಎಲ್ ರಾಹುಲ್ ಅವಕಾಶ ವಂಚಿತವಾಗಿದ್ದಾರೆ.
ಮಧ್ಯಮ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ ಹಾಗೂ ಉಪನಾಯಕ ಅಜಿಂಕ್ಯ ರಹಾನೆ ಬಲ ತುಂಬಲಿದ್ದಾರೆ. ಕೆಳ ಕ್ರಮಾಂಕದಲ್ಲಿ ಹನುಮ ವಿಹಾರಿಗೆ ಅವಕಾಶ ಕಲ್ಪಿಸಲಾಗಿದೆ. ಹಾಗೆಯೇ ವೃದ್ಧಿಮಾನ್ ಸಹಾ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.
ಇನ್ನು ಬೌಲಿಂಗ್ ವಿಭಾಗದಲ್ಲಿ ಜಸ್‍ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ಉಮೇಶ್ ಯಾದವ್, ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಂಡಕ್ಕೆ ಬಲ ತುಂಬಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








