ಮಲೆನಾಡಿನಲ್ಲಿ ಮುಂದುವರೆಯಲಿದೆ ಆಶ್ಲೇಷಾ ಮಳೆ ಅಬ್ಬರ
ಬೆಂಗಳೂರು : ಮಲೆನಾಡಿನಲ್ಲಿ ಆಶ್ಲೇಷಾ ಮಳೆಯ ಅಬ್ಬರ ಮುಂದುವರೆಯಲಿದೆ. ಕಳೆದೊಂದು ವಾರದಿಂದ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಈ ಮಧ್ಯೆ ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆಗಸ್ಟ್ 8 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
ಕಳೆದೊಂದು ವಾರದಿಂದ ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಧೋ ಎಂದು ಭೋರ್ಗರೆವ ಮಳೆ ಇನ್ನಾದರೂ ಶಾಂತವಾಗಲಿ ಎಂದು ಜನ ಪ್ರಾರ್ಥಿಸುವಂತಾಗಿದೆ.
ಹಮಾಮಾನ ಇಲಾಖೆ ಇಂದು ಮತ್ತೆ ನಾಳೆ ಮಲೆನಾಡು ಭಾಗದಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದು, ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿದೆ.
ಇದಲ್ಲದೆ ಆಗಸ್ಟ್ 8ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದುವರೆಯಲಿದೆ ಎನ್ನಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಇಂದು ಮೋಡ ಕವಿದ ವಾತಾವರಣದೊಂದಿಗೆ ಮಳೆಯಾಗುವ ನಿರೀಕ್ಷೆ ಇದೆ.