Ashok Gehlot | ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧಿಸಲ್ಲ
ನವದೆಹಲಿ : ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಚುನಾವಣೆಯ ಬಗ್ಗೆ ಕಳೆದ ಕೆಲವು ದಿನಗಳಿಂದ ಚರ್ಚೆ ನಡೆಯುತ್ತಲೇ ಇದೆ.
ಅದರಲ್ಲೂ ಈ ಬಾರಿ ಗಾಂಧಿಯೇತರ ಕುಟುಂಬದವರೇ ಎಐಸಿಸಿ ಅಧ್ಯಕ್ಷ ಸ್ಥಾನದಲ್ಲಿ ಕುಳಿತುಕೊಳ್ಳುತ್ತಾರೆ.
ಮುಖ್ಯವಾಗಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮುಂದಿನ ಎಐಸಿಸಿ ಅಧ್ಯಕ್ಷ ಅಂತಾ ಹೇಳಲಾಗುತ್ತಿತ್ತು.
ಆದ್ರೆ ಇದೀಗ ಅಶೋಕ್ ಗೆಹ್ಲೋಟ್ ಯೂಟರ್ನ್ ಹೊಡೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ಸ್ವತಃ ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಸ್ಪಷ್ಟಪಡಿಸಿದ್ದಾರೆ.

ಗೆಹ್ಲೋಟ್ ಅವರು ಇಂದು ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೆಹ್ಲೋಟ್, ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದ್ದರಿಂದ ನಾನು ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ.
ಈ ಬಗ್ಗೆ ಸೋನಿಯಾ ಗಾಂಧಿ ಅವರ ಬಳಿ ಚರ್ಚೆ ನಡೆಸಿದ್ದೇನೆ.
ರಾಜಸ್ಥಾನದಲ್ಲಿ ನಡೆದ ಘಟನೆಯ ನೈತಿಕ ಹೊಣೆ ಹೊತ್ತು, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.








