ಚಾಮರಾಜನಗರದ ಆಶ್ರಿತಾ… ಭಾರತದ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್ …!
ಚಾಮರಾಜನಗರ : ಮಹಿಳೆಯರು ಪ್ರತಿ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದು , ಪುರುಷರಿಗಿಂತ ತಾವು ಯಾವುದೇ ವಿಚಾರದಲ್ಲೂ ಕಡಿಮೆ ಇಲ್ಲ ಅನ್ನೋದನ್ನ ಸಾಬೀತಯ ಪಡಿಸಿದ್ದಾರೆ, ಗಗನದಿಂದ ಹಿಡಿದು ಮಿಲಿಟರಿ ಹೀಗೆ ಎಲ್ಲಾ ಕ್ಷೇತ್ರಗಳಲ್ಲು ಸಾಧನೆಯ ಪುಟದಲ್ಲಿ ಮಹಿಳೆಯರು ತಮ್ಮ ಹೆಸರನ್ನ ದಾಖಲು ಮಾಡಿಕೊಂಡಿದ್ದಾರೆ..
ಇದೀಗ ಭಾರತದ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್ ಆಗಿ ನಮ್ಮ ಕರ್ನಾಟಕದ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಯುವರತಿ ಆಯ್ಕೆಯಾಗಿದ್ದಾರೆ. ಆಶ್ರಿತಾ ವಿ ಒಲೆಟಿ ಇಡೀ ಪ್ರಪಂಚದಲ್ಲಿರುವ ಏಳು ವಿಶ್ವವಿದ್ಯಾಲಯಗಳ ಪೈಕಿ ಒಂದಾಗಿರುವ ಭಾರತದ ಪ್ರತಿಷ್ಠಿತ ಏರ್‌ಫೋರ್ಸ್ ಟೆಸ್ಟ್ ಪೈಲಟ್ ಸ್ಕೂಲ್‌ನಿಂದ ಪದವಿಯನ್ನು ಪಡೆದುಕೊಂಡಿದ್ದಾರೆ.
1976ರಲ್ಲಿ ಸ್ಥಾಪನೆಯಾದಾಗಿನಿಂದ ಈವರೆಗೆ ಕೇವಲ 275 ಪದವೀಧರರು ಮಾತ್ರ ಈ ಕೋರ್ಸ್ ಅನ್ನು ಪೂರ್ಣಗೊಳಿಸಿದ್ದಾರೆ. ಅತ್ಯಂತ ಕಠಿಣ ತರಬೇತಿಗಳನ್ನು ಒಳಗೊಂಡಿರುವ ಈ ಕೋರ್ಸ್ ಅನ್ನು ಆಶ್ರಿತಾ ಒಲೆಟಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಈ ಮೂಲಕ ವಾಯುಸೇನೆಯ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಎಂಜಿನಿಯರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಭಾರತೀಯ ವಾಯುದಳದ ಮೊಟ್ಟ ಮೊದಲ ಮಹಿಳಾ ಅಧಿಕಾರಿಯಾಗಿ ಆಯ್ಕೆಯಾಗಿದ್ದು, ರಾಜ್ಯಕ್ಕೆ ಹೆಮ್ಮೆ…
ಫ್ಲೈಟ್ ಟೆಸ್ಟ್ ಇಂಜಿನಿಯರ್‌ಗಳು ಹೊಸ ವಿಮಾನಗಳ ವ್ಯವಸ್ಥೆಯನ್ನು ಮೌಲ್ಯಮಾಪನ ಮಾಡಲಿದ್ದು, ವಿಮಾನಗಳ ಸೇವೆಯಲ್ಲಿ ಇವರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಪದವಿ ಪ್ರದಾನ ಸಮಾರಂಭ ಮುಗಿದಿದ್ದು, ವಾಯುಸೇನೆಯ ಅಧಿಕೃತವಾಗಿ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್ ಆಗಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.