ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮೊದಲಿಗೆ ಅಧಿಕಾರ ದುರ್ಬಳಿಕೆ ಕುರಿತು ಪ್ರಶ್ನೆಗಳಿಗೆ ಉತ್ತರಿಸಲಿ ಎಂದು ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪುಟ್ಟಣ್ಣ ವಿರುದ್ಧ ಎಚ್‍ಡಿಕೆ ಮಾಡಿದ ಆರೋಪಗಳಿಗೆ ತಿರುಗೇಟು ಕೊಟ್ಟಿದ್ದಾರೆ.
ಪಕ್ಷದ ಕಚೇರಿಯಲ್ಲಿ ಗುರುವಾರ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರದ ಅವಧಿಯಲ್ಲಿ ಅಕ್ರಮಗಳು ಆಗಿದ್ದರೇ ಸರ್ಕಾರ ಖಂಡಿತ ಕ್ರಮ ಕೈಗೊಳ್ಳುತ್ತದೆ.
ಇದನ್ನೂ ಓದಿ : ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಒಬ್ಬ ಕಾಡು ಮನುಷ್ಯ, ಪೋಕರಿ : ಸಿದ್ದರಾಮಯ್ಯ
ಗಾಳಿಯಲ್ಲಿ ಗುಂಡು ಹಾರಿಸುವಂತಹ ಆರೋಪಗಳು ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದ ಪಕ್ಷದ ಅಭ್ಯರ್ಥಿ ಗೆಲುವನ್ನು ತಡೆಯಲಾಗದು.
ಬೆಂಗಳೂರು ಶಿಕ್ಷಕರ ಕ್ಷೇತ್ರ ಸೇರಿದಂತೆ 4 ವಿಧಾನ ಪರಿಷತ್ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
ಇದೇ ವೇಳೆ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರ ಆರೋಪಗಳಿಗೆ ಈಗ ಉತ್ತರಿಸುವುದಿಲ್ಲ.
ಇದನ್ನೂ ಓದಿ : ರಂಗೇರಿದ ಶಿರಾ ಕಣ : ಇಂದು ಸಿದ್ದರಾಮಯ್ಯ-ದೇವೇಗೌಡ ಮತಬೇಟೆ
ಕಳೆದ 3 ಅವಧಿಯಲ್ಲಿ ಮಾಡಿದ ಕೆಲಸಗಳು, ಪಕ್ಷದ ವರ್ಚಸ್ಸು, ಕೇಂದ್ರ-ರಾಜ್ಯ ಸರ್ಕಾರಗಳ ಸಾಧನೆ ಗಮನಿಸಿ 4ನೇ ಬಾರಿಯೂ ಅವಕಾಶ ಕೊಡಲು ಮತದಾರರಲ್ಲಿ ಮನವಿ ಮಾಡಿಕೊಳ್ಳುತ್ತಿರುವೆ ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel