ಕಲಬುರಗಿ : ರಾಜ್ಯ ರಾಜಕಾರಣದಲ್ಲಿ ಸದ್ಯ `ಧಮ್’ ಭಾರಿ ಸದ್ದು ಮಾಡುತ್ತಿದೆ. ಸಿದ್ದರಾಮಯ್ಯ, ಬಿಜೆಪಿ ನಾಯಕರ ಮಧ್ಯೆ ಈ ಧಮ್ ವಾಗ್ಯುದ್ಧ ಜೋರಾಗಿ ನಡೆಯುತ್ತಿದೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರು ಸಿದ್ದರಾಮಯ್ಯಗಿಂತ ಹೆಚ್ಚು ಧಮ್ ಇದೆ ಅಂತಾರೆ.
ಅವರಿಗೆ ಧಮ್ ಇದ್ದರೆ ಪ್ರಧಾನಿ ಮೋದಿ ಮುಂದೆ ಕೂತು ಪರಿಹಾರ ತೆಗೆದುಕೊಂಡು ಬರಲಿ ಎಂದು ಅಶ್ವಥ್ ನಾರಾಯಣ್ ಅವರಿಗೆ ಸವಾಲೆಸೆದಿದ್ದಾರೆ.
ಇದೇ ವೇಳೆ ಸಿಎಂ ವೈಮಾನಿಕ ಸಮೀಕ್ಷೆ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಮುಖ್ಯಮಂತ್ರಿ ವೈಮಾನಿಕ ಸಮೀಕ್ಷೆಯಿಂದ ಯಾವುದೇ ಪ್ರಯೋಜನ ಇಲ್ಲ.
ಇದನ್ನೂ ಓದಿ : ಕಾಂಗ್ರೆಸ್ ನಲ್ಲಿ ಸಿಎಂ ಪಟ್ಟಕ್ಕಾಗಿ ಕಚ್ಚಾಟ… ಮುಂದಿನ ಸಿಎಂ ಅಭ್ಯರ್ಥಿ ಯಾರು..?
ಜನರ ಜೊತೆ ಮಾತನಾಡಿಲ್ಲ, ನೆರೆ ಪೀಡಿತ ಪ್ರದೇಶಗಳಿಗೆ ಹೋಗಿಲ್ಲ. ರಾಜ್ಯದಲ್ಲಿ 25 ಬಿಜೆಪಿ ಸಂಸದರು ಇದ್ದರೂ ಪ್ರಯೋಜನವಿಲ್ಲ ಎಂದು ದೂರಿದರು.
ಈ ಬಿಜೆಪಿ ಸರ್ಕಾರ ಜನವಿರೋಧಿ ಸರ್ಕಾರವಾಗಿದೆ. ಯಡಿಯೂರಪ್ಪ ಚೆಕ್ ಮೂಲಕ ಲಂಚ ಪಡೆಯುತ್ತಿದ್ದರು. ಇದೀಗ ಅವರ ಮಗ ಆರ್ ಟಿಜಿಎಸ್ ಮೂಲಕ ಲಂಚ ಪಡೆಯುತ್ತಿದ್ದಾರೆ.
ಇದನ್ನೂ ಓದಿ : ಬೈ ಎಲೆಕ್ಷನ್ ನಲ್ಲಿ ಗೆಲುವು ಸಾಧಿಸದೇ ಡಿಕೆ ಬ್ರದರ್ಸ್ ವಿರಮಿಸಲ್ಲ : ಜನಾರ್ದನ ಪೂಜಾರಿ
ಇಂತಹ ಭ್ರಷ್ಟ ಸರ್ಕಾರವನ್ನು ನಾನು ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel