Asia Cup 2022 : ಏಷ್ಯಾ ಕಪ್‌ನಿಂದ ಜಡೇಜಾ ಔಟ್
ಏಷ್ಯಾಕಪ್ ನಲ್ಲಿ ಫೆವರೇಟ್ ಆಗಿರುವ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದೆ.
ಮೊಣಕಾಲಿನ ಗಾಯದಿಂದಾಗಿ ಆಲ್ ರೌಂಡರ್ ರವೀಂದ್ರ ಜಡೇಜಾ ಏಷ್ಯಾಕಪ್ ಟೂರ್ನಿಯಿಂದ ಹೊರನಡೆದಿದ್ದಾರೆ.
ಜಡ್ಡು ಪ್ಲೇಸ್ ನಲ್ಲಿ ಅಕ್ಷರ್ ಪಟೇಲ್ ಸ್ಥಾನಪಡೆದಿದ್ದಾರೆ. ಸದ್ಯ ಜಡೇಜಾ ವೈದ್ಯರ ಪರಿವೀಕ್ಷಣೆಯಲ್ಲಿದ್ದಾರೆ.
ಏಷ್ಯಾಕಪ್ ನಲ್ಲಿ ಟೀಂ ಇಂಡಿಯಾ ಈವರೆಗೂ ಆಡಿದ ಎರಡು ಪಂದ್ಯಗಳಲ್ಲಿ ಜಡೇಜಾ ಆಡಿದ್ದಾರೆ.

ಮುಖ್ಯವಾಗಿ ಪಾಕಿಸ್ತಾನ ತಂಡದ ವಿರುದ್ಧದ ಪಂದ್ಯದಲ್ಲಿ ಜಡ್ಡು 35 ರನ್ ಗಳಿಸಿದ್ದರು.
ಆ ಮೂಲಕ ಪಂದ್ಯ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹಾಂಗ್ ಕಾಂಗ್ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ನಲ್ಇ ಮಿಂಚಿದ್ರು.
ಸದ್ಯ ಎರಡು ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಸೂಪರ್ ನಾಲ್ಕರ ಘಟ್ಟಕ್ಕೆ ಎಂಟ್ರಿಕೊಟ್ಟಿದೆ.
ಭಾರತ ಕ್ರಿಕೆಟ್ ತಂಡ
ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ದೀಪಕ್ ಹೂಡಾ, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಆರ್.ಅಶ್ವಿನ್, ಯುಜುವೇಂದ್ರ ಚಹಾಲ್, ರವಿ ಬಿಷ್ಣೋಯ್ನಿ, ಭುವನೇಶ್ವರ್ ಕುಮಾರ್, ಅರ್ಷ್ ದೀಪ್ ಸಿಂಗ್, ಆವೇಶ್ ಖಾನ್








