Asia Cup 2022 | ಟಿ 20 ಕ್ರಿಕೆಟ್ ನಲ್ಲಿ ಸೂರ್ಯ ಅಪರೂಪದ ದಾಖಲೆ
ಏಷ್ಯಾಕಪ್ ನಲ್ಲಿ ಟೀಂ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ಅಪರೂಪದ ದಾಖಲೆ ಮಾಡಿದ್ದಾರೆ.
ಏಷ್ಯಾಕಪ್‌ನ ಭಾಗವಾಗಿ, ಒಂದೇ ಪಂದ್ಯದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.
ಏಷ್ಯಾಕಪ್-2022ರ ಅಂಗವಾಗಿ ಹಾಂಕಾಂಗ್ ವಿರುದ್ಧದ ಪಂದ್ಯದಲ್ಲಿ ಸೂರ್ಯ 6 ಸಿಕ್ಸರ್ ಬಾರಿಸಿ ಈ ಅಪರೂಪದ ಸಾಧನೆ ಮಾಡಿದ್ದಾರೆ.
ಈ ಹಿಂದೆ ಏಷ್ಯಾಕಪ್ ಟಿ20 ಪಂದ್ಯದಲ್ಲಿ ಭಾರತದ ಯಾವೊಬ್ಬ ಆಟಗಾರನೂ 3ಕ್ಕಿಂತ ಹೆಚ್ಚು ಸಿಕ್ಸರ್ ಬಾರಿಸಿರಲಿಲ್ಲ.
ಈ ಪಂದ್ಯದಲ್ಲಿ ಸೂರ್ಯ ಅಬ್ಬರಿಸಿ ಬೊಬ್ಬಿರಿದಿದ್ದರು. ಅವರು ಕೇವಲ 26 ಎಸೆತಗಳಲ್ಲಿ 68 ರನ್ ಗಳಿಸಿದರು.

ಅದರಲ್ಲೂ ಭಾರತ ಇನಿಂಗ್ಸ್ ನ ಕೊನೆಯ ಓವರ್ ನಲ್ಲಿ ಅರ್ಷದ್ ಬೌಲಿಂಗ್ ನಲ್ಲಿ ಸೂರ್ಯ 26 ರನ್ ಗಳಿಸಿದ್ದರು.
ಹೀಗಾಗಿ ಮತ್ತೊಂದು ಅಪರೂಪದ ದಾಖಲೆಯನ್ನು ತಮ್ಮ ಹೆಸರಲ್ಲಿ ಬರೆದಿದ್ದಾರೆ.
ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕೊನೆಯ ಓವರ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟೀಂ ಇಂಡಿಯಾದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಸೂರ್ಯ ಪಾತ್ರರಾದರು
ಈ ಪಂದ್ಯದಲ್ಲಿ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಸೂರ್ಯಕುಮಾರ್, ಟಿ20ಯಲ್ಲಿ ಅತಿ ವೇಗದ ಅರ್ಧಶತಕ ಗಳಿಸಿದ ಭಾರತೀಯ ಆಟಗಾರರ ಪಟ್ಟಿಗೆ ಸೇರ್ಪಡೆಗೊಂಡರು.
ಅದೇ ರೀತಿ 22 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಭಾರತದ ನಾಯಕ ರೋಹಿತ್ ಶರ್ಮಾ ದಾಖಲೆ ಸರಿಗಟ್ಟಿದರು.








