Asia Cup 2022 | ರೋಹಿತ್ ವಿಶ್ವದಾಖಲೆ ಬ್ರೇಕ್ ಮಾಡಿದ ವಿರಾಟ್
ಏಷ್ಯಾ ಕಪ್ 2022 ರ ಅಂಗವಾಗಿ, ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಬುಧವಾರ (ಆಗಸ್ಟ್ 31) ಹಾಂಗ್ ಕಾಂಗ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಹಾಲಿ ನಾಯಕ ರೋಹಿತ್ ಶರ್ಮಾ ಅವರ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.
ಈ ಪಂದ್ಯದಲ್ಲಿ ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದ ಕೊಹ್ಲಿ ವೃತ್ತಿ ಜೀವನದಲ್ಲಿ 31ನೇ ಅರ್ಧಶತಕ ದಾಖಲಿಸಿದರು. ಇದರೊಂದಿಗೆ ರೋಹಿತ್ ಶರ್ಮಾ ದಾಖಲೆ ಸರಿಗಟ್ಟಿದ್ದಾರೆ.
ರೋಹಿತ್ 134 ಪಂದ್ಯಗಳಲ್ಲಿ 31 ಅರ್ಧಶತಕಗಳನ್ನು ಬಾರಿಸಿದ್ದು, ಕೊಹ್ಲಿ 101 ಪಂದ್ಯಗಳಲ್ಲಿ 31 ಅರ್ಧಶತಕಗಳ ಗಡಿಯನ್ನು ತಲುಪಿದ್ದಾರೆ.
ಕೊಹ್ಲಿ ಮತ್ತು ರೋಹಿತ್ ನಂತರ T20I ಗಳಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಗಳಿಸಿದ ಟಾಪ್-5 ಆಟಗಾರರಲ್ಲಿ ಬಾಬರ್ ಅಜಮ್ (27), ಡೇವಿಡ್ ವಾರ್ನರ್ (23) ಮತ್ತು ಮಾರ್ಟಿನ್ ಗಪ್ಟಿಲ್ (22) ಇದ್ದಾರೆ.

ಈ ಪಂದ್ಯದಲ್ಲಿ ರೋಹಿತ್ ಹೆಸರಿನಲ್ಲಿದ್ದ ಈ ದಾಖಲೆಯನ್ನು ಕೊಹ್ಲಿ ಸರಿಗಟ್ಟಿದರೆ, ರೋಹಿತ್ ಮತ್ತೊಂದು ಅಪರೂಪದ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಬರೆದುಕೊಂಡಿದ್ದಾರೆ.
ಅಂತಾರಾಷ್ಟ್ರೀಯ ಟಿ20ಯಲ್ಲಿ 3500 ರನ್ ಗಳಿಸಿದ ಏಕೈಕ ಬ್ಯಾಟ್ಸ್ಮನ್ ಎಂದು ಹಿಟ್ಮ್ಯಾನ್ ಇತಿಹಾಸ ನಿರ್ಮಿಸಿದ್ದಾರೆ.
ಈ ಪಂದ್ಯದಲ್ಲಿ 21 ರನ್ ಗಳಿಸಿದ್ದ ರೋಹಿತ್ ಈಗ 134 ಪಂದ್ಯಗಳಲ್ಲಿ 3520 ರನ್ ಗಳಿಸಿದ್ದಾರೆ.
ನ್ಯೂಜಿಲೆಂಡ್ನ ಅನುಭವಿ ಆರಂಭಿಕ ಬ್ಯಾಟ್ಸ್ಮನ್ ಮಾರ್ಟಿನ್ ಗಪ್ಟಿಲ್ (3497) ರೋಹಿತ್ ನಂತರ ಎರಡನೇ ಸ್ಥಾನದಲ್ಲಿದ್ದರೆ ಮತ್ತು ವಿರಾಟ್ ಕೊಹ್ಲಿ (3402) ಮೂರನೇ ಸ್ಥಾನದಲ್ಲಿದ್ದಾರೆ. asia-cup-2022-virat-kohli-equals-rohit-sharma-most-t20i-fifties








