Asia Cup 2022 : ಪಾಕ್ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾ ಹೇಗಿರಲಿದೆ ?
ಇಂದಿನಿಂದ ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿ ಆರಂಭವಾಗಲಿದೆ. ಶ್ರೀಲಂಕಾ – ಅಫ್ಘಾನಿಸ್ತಾನ ತಂಡಗಳ ನಡುವಿನ ಪಂದ್ಯದೊಂದಿಗೆ ಏಷ್ಯಾಕಪ್ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ.
ಮತ್ತೊಂದು ಕಡೆ ಏಷ್ಯಾಕಪ್ ನಲ್ಲಿ ಇಂಡೋ – ಪಾಕ್ ಕದನಕ್ಕೆ ಕ್ಷಣಗಣನೆ ಶುರುವಾಗಿದೆ.
ಟೀ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.
ಹೀಗಾಗಿ ಈ ಪಂದ್ಯಕ್ಕಾಗಿ ಇಡೀ ಕ್ರಿಕೆಟ್ ಜಗತ್ತೇ ಎದುರು ನೋಡುತ್ತಿದೆ.
ಕಳೆದ ಟಿ 20 ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲುಂಡಿರುವುದು ಗೊತ್ತಿರುವ ವಿಚಾರವೇ.
ಇದಾದ ಬಳಿಕ ಟೀಂ ಇಂಡಿಯಾ – ಪಾಕಿಸ್ತಾನ ನಡುವೆ ಪಂದ್ಯಗಳೇ ನಡೆದಿಲ್ಲ.
ಹೀಗಾಗಿ ಆಗಸ್ಟ್ 28 ರಂದು ನಡೆಯಲಿರುವ ಪಂದ್ಯ ಸೇಡಿನ ಸಮರವಾಗಿದೆ.

ಟೀಂ ಇಂಡಿಯಾ ಪಾಕಿಸ್ತಾನ ತಂಡದ ವಿರುದ್ಧ ಸೇಡು ತೀರಿಸಿಕೊಳ್ಳಲು ಪ್ಲಾನ್ ಮಾಡುತ್ತಿದೆ.
ಈ ನಡುವೆ ಈ ಪಂದ್ಯಕ್ಕಾಗಿ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಅನ್ನು ಟೀಂ ಇಂಡಿಯಾದ ಮಾಜಿ ಆಟಗಾರ ವಾಸೀಂ ಜಾಫರ್ ಆಯ್ಕೆ ಮಾಡಿದ್ದಾರೆ.
ಜಾಫರ್ ಪ್ರಕಟಿಸಿರುವ ತಂಡದಲ್ಲಿ ಓಪನರ್ ಆಗಿ ರೋಹಿತ್ ಶರ್ಮಾ, ವೈಸ್ ಕ್ಯಾಪ್ಟನ್ ಕೆ.ಎಲ್.ರಾಹುಲ್ ಅವರನ್ನು ಆಯ್ಕೆ ಮಾಡಿದ್ದಾರೆ.
ಅದೇ ರೀತಿ ಒನ್ ಡೌನ್ ನಲ್ಲಿ ವಿರಾಟ್ ಕೊಹ್ಲಿ ಇದ್ದು, ನಾಲ್ಕು ಮತ್ತು ಐದನೇ ಸ್ಥಾನದಲ್ಲಿ ಸೂರ್ಯ ಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಕಣಕ್ಕಳಿಯಲಿದ್ದಾರೆ.
ಇನ್ನು ಆರನೇ ಸ್ಥಾನಕ್ಕಾಗಿ ದಿನೇಶ್ ಕಾರ್ತಿಕ್, ರಿಷಬ್ ಪಂತ್ ನಡುವೆ ತೀವ್ರ ಪೈಪೋಟಿ ಇದೆ ಎಂದು ಜಾಫರ್ ಹೇಳಿದ್ದಾರೆ.
ಒಂದು ವೇಳೆ ಪಂತ್ ಅಂತಿಮ ಪಂದ್ಯದಲ್ಲಿ ಕಾಣಿಸಿಕೊಂಡರೇ ಐದನೇ ಸ್ಥಾನದಲ್ಲಿ ಬ್ಯಾಟಿಂಗ್ ಗೆ ಬರಲಿದ್ದಾರೆ ಎಂದು ವಾಸೀಂ ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಜಾಫರ್ ಅವರ ಅಂತಿಮ ತಂಡದಲ್ಲಿ ಫುಲ್ ಟೈಂ ಆಲ್ ರೌಂಡರ್ ಆಗಿ ರವೀಂದ್ರ ಜಡೇಜಾ ಸ್ಥಾನ ಪಡೆದಿದ್ದಾರೆ.
ಇನ್ನು ಬೌಲರ್ ಗಳ ಕೋಟಾದಲ್ಲಿ ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯಿ, ಚಹಾಲ್, ಅರ್ಷ್ ದೀಪ್ ಸಿಂಗ್ ಗೆ ಜಾಫರ್ ಅವಕಾಶ ನೀಡಿದ್ದಾರೆ.
ಆದ್ರೆ ಜಾಫರ್ ತಮ್ಮ ತಂಡದಲ್ಲಿ ಇತ್ತೀಚೆಗೆ ಅದ್ಭುತ ಪ್ರದರ್ಶನ ನೀಡುತ್ತಿರುವ ದೀಪಕ್ ಹೂಡಾ ಅವರನ್ನು ಆಯ್ಕೆ ಮಾಡಿಲ್ಲ. ಮತ್ತೊಂದು ಕಡೆ ಹಿರಿಯ ಸ್ಪಿನ್ನರ್ ಅಶ್ವಿನ್ ಅವರನ್ನು ಕೂಡ ತಂಡದಲ್ಲಿ ಆಯ್ಕೆ ಮಾಡಿಲ್ಲ.







