ಏಷ್ಯಾ ಕಪ್ 2025ರ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಈ ಬಾರಿ ಯುಎಇಯಲ್ಲಿ ಸೆಪ್ಟೆಂಬರ್ 9ರಿಂದ 28ರವರೆಗೆ ಏಷ್ಯಾ ಕಪ್ ನಡೆಯಲಿದೆ. ಒಟ್ಟು 8 ತಂಡಗಳನ್ನು ತಲಾ ನಾಲ್ಕು ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ.
ಆರಂಭಿಕ ಪಂದ್ಯವು ಸೆಪ್ಟೆಂಬರ್ 9ರಂದು ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ತಂಡಗಳು ಆಡಲಿವೆ. ಭಾರತ ತನ್ನ ಮೊದಲ ಪಂದ್ಯವನ್ನು ಸೆಪ್ಟೆಂಬರ್ 10ರಂದು ಆತಿಥೇಯ ಯುಎಇ ವಿರುದ್ಧ ಆಡಲಿದೆ.
ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿ ಇರುವುದರಿಂದ, ಈ ಬಾರಿ ಎರಡೂ ತಂಡಗಳು ಕನಿಷ್ಠ ಒಮ್ಮೆ ಹಾಗೂ ಗರಿಷ್ಠ ಮೂರೂ ಬಾರಿ ಮುಖಾಮುಖಿಯಾಗುವ ಸಾಧ್ಯತೆ ಇದೆ. ಕ್ರಿಕೆಟ್ ಅಭಿಮಾನಿಗಳು ಅತ್ಯಂತ ಕಾತರದಿಂದ ನಿರೀಕ್ಷಿಸುತ್ತಿರುವ ಭಾರತ vs ಪಾಕಿಸ್ತಾನ ಪಂದ್ಯ ಸೆಪ್ಟೆಂಬರ್ 14ರಂದು ನಡೆಯಲಿದೆ.








