ದಸರಾ ಉದ್ಘಾಟನೆ ಕುರಿತು ವಿವಾದದ ನಡುವಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಬಾನು ಮುಷ್ಕಾಕ್ ಅವರ ವಿರುದ್ಧ ವ್ಯಕ್ತವಾಗುತ್ತಿರುವ ಟೀಕೆಗಳನ್ನು ತೀವ್ರವಾಗಿ ಖಂಡಿಸಿದ್ದಾರೆ.
ಮಿರ್ಜಾ ಇಸ್ಮಾಯಿಲ್ ಅವರನ್ನು ಅಂಬಾರಿ ಮೇಲೇರಿಸಿ ಮಹಾರಾಜರು ಮೆರವಣಿಗೆ ಮಾಡಿಸುತ್ತಿದ್ದರು. 2017ರಲ್ಲಿ ಕವಿ ನಿಸಾರ್ ಅಹಮದ್ ದಸರಾ ಉದ್ಘಾಟನೆ ಮಾಡಿದ್ದರು. ಆಗ ಬಿಜೆಪಿ ನಾಯಕರು ಎಲ್ಲಿ ಹೋಗಿದ್ದರು?” ಎಂದು ಅವರು ಪ್ರಶ್ನಿಸಿದ್ದಾರೆ.
ಬಾನು ಮುಷ್ಕಾಕ್ ಅವರು ಕನ್ನಡದ ಬರಹಗಾರ್ತಿ, ಬೂಕರ್ ಪ್ರಶಸ್ತಿ ವಿಜೇತರು. ಅವರು ಒಬ್ಬರು ಮುಸ್ಲಿಂ ಮಹಿಳೆ ಎಂಬ ಕಾರಣಕ್ಕೆ ವಿರೋಧ ತೋರಿಸುವುದು ಸರಿಯಲ್ಲ.
ಬೇರೆ ಧರ್ಮದವರನ್ನು ಉದ್ಘಾಟಕರನ್ನಾಗಿ ಆಹ್ವಾನಿಸಿದರೆ, ಕುಂಕುಮ ಹಚ್ಚಿಕೊಂಡು ಬನ್ನಿ ಎನ್ನುವುದು ತರವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ದಸರಾ ಮಹೋತ್ಸವದ ಉದ್ಘಾಟಕರಾಗಿ ಬಾನು ಮುಷ್ಕಾಕ್ ಅವರನ್ನು ಆಹ್ವಾನಿಸಿರುವುದಕ್ಕೆ ಕೆಲವು ವಲಯಗಳಿಂದ ವಿರೋಧ ವ್ಯಕ್ತವಾಗಿದೆ. ಇದರ ವಿರುದ್ಧ ಸಿಎಂ ಸಿದ್ದರಾಮಯ್ಯ ಬಾಯಿಬಿಟ್ಟಿದ್ದಾರೆ.







